ಬೆಂಗಳೂರು ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 7: ಬೆಂಗಳೂರಿನ ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿದಿತ ದಿನಾಂಕ ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಎಸ್ಎಸ್ಎಲ್ ಸಿ ಪೂರ್ಣಗೊಳಿಸಿದ ಬಳಿಕ ಐಟಿಐ ಕೋರ್ಸ್ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ: 6841 ರು, ತಿಂಗಳಿಗೆ.
ವಯೋಮಿತಿ: 29.11.2017ಕ್ಕೆ ಅನ್ವಯವಾಗುವಂತೆ 15 ರಿಂದ 24 ವರ್ಷ.
ಆಯ್ಕೆ ವಿಧಾನ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications