ಬ್ಯಾಂಕ್ ಆಫ್ ಬರೋಡಾದಲ್ಲಿ 424 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 24 : ಬ್ಯಾಂಕ್ ಆಫ್ ಬರೋಡಾದಲ್ಲಿ 424 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 6, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
375 ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್, 37 ಟೆರಟರಿ ಹೆಡ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ 23 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಟೆರಟರಿ ಹೆಡ್ ಹುದ್ದೆಗೆ 30 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ವಯೋಮಿತಿ 6/5/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್/ಕ್ರೆಡಿಟ್/ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ, ಶುಲ್ಕವನ್ನು ಪಾವತಿ ಮಾಡಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications