ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ: ಈ ಅಭ್ಯರ್ಥಿಗಳು ಅರ್ಜಿ ಹಾಕಿ
ಭಾರತ, ನವೆಂಬರ್ 17: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 15 ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಪದವಿ, ಬಿಇ, ಬಿ. ಟೆಕ್, ಎಂ. ಟೆಕ್, ಎಂಇ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 6ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ www.bankofbaroda.inಗೆ ಭೇಟಿ ನೀಡಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗಿದ್ದು, ಈ ಎಲ್ಲದರ ಕುರಿತ ಇಲ್ಲಿದೆ ಮಾಹಿತಿ.

ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಹುದ್ದೆಯ ಹೆಸರು: ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್
ಒಟ್ಟು ಹುದ್ದೆಗಳು: 15 ಹುದ್ದೆಗಳು
ವಿದ್ಯಾರ್ಹತೆ: ಪದವಿ, ಬಿಇ, ಬಿ. ಟೆಕ್, ಎಂ. ಟೆಕ್, ಎಂಇ
ಉದ್ಯೋಗದ ಸ್ಥಳ: ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನಿರ್ವಹಿಸಬೇಕಾಗುತ್ತದೆ
ವೇತನ: ಮಾಸಿಕ 48,170 ರೂ.ನಿಂದ 89,890 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/12/2021
ಅರ್ಜಿ ಶುಲ್ಕ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಮತ್ತು EWS ಅಭ್ಯರ್ಥಿಗಳು 600 ರೂಪಾಯಿ ಅರ್ಜಿ ಶುಲ್ಕ ಕಟ್ಟಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/PWD ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಯ ಮಾಹಿತಿ:
ಡಾಟಾ ಸೈಂಟಿಸ್ಟ್ ಹುದ್ದೆಗಳು: 09
ಡಾಟಾ ಎಂಜಿನಿಯರ್ ಹುದ್ದೆಗಳು: 06
ವಿದ್ಯಾರ್ಹತೆ
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಯಾವುದೇ ಪದವಿ/ ಬಿಇ/ ಬಿ ಟೆಕ್/ ಎಂ ಟೆಕ್/ ಎಂಇ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25ರಿಂದ 40 ವರ್ಷದೊಳಗಿರಬೇಕು.
ವೇತನ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 48,170-89,890 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಲಾಗುವುದು.
Recommended Video
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications