ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 220 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 27; ಬ್ಯಾಂಕ್ ಆಫ್ ಬರೋಡಾ 220 ವಿವಿಧ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 14 ಕೊನೆಯ ದಿನವಾಗಿದೆ.

ಬ್ಯಾಂಕ್ ಆಫ್ ಬರೋಡಾ ಝೋನಲ್ ಸೇಲ್ಸ್ ಮ್ಯಾನೇಜರ್, ರೀಜನಲ್ ಸೇಲ್ಸ್ ಮ್ಯಾನೇಜರ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಸೇರಿ 220 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್‌ನಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ.

Bank Of Baroda Recruitment Apply For 220 Post

ಎಷ್ಟು ಹುದ್ದೆಗಳು; ಝೋನಲ್ ಸೇಲ್ಸ್ ಮ್ಯಾನೇಜರ್ 11, ರೀಜನಲ್ ಸೇಲ್ಸ್ ಮ್ಯಾನೇಜರ್ 9, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ 50, ಸೀನಿಯರ್ ಮ್ಯಾನೇಜರ್ 110, ಮ್ಯಾನೇಜರ್ 40 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ವಯೋಮಿತಿ ವಿವರ; ಝೋನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗೆ 32 ರಿಂದ 48 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ರೀಜನಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗೆ 28 ರಿಂದ 45 ವರ್ಷ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗೆ 28 ರಿಂದ 40 ವರ್ಷ. ಸೀನಿಯರ್ ಮ್ಯಾನೇಜರ್ ಹುದ್ದೆಗೆ 25 ರಿಂದ 37 ವರ್ಷ. ಮ್ಯಾನೇಜರ್ ಹುದ್ದೆಗೆ 22 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ https://www.bankofbaroda.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ದಾಖಲಾತಿ ಸಲ್ಲಿಕೆಗೆ ಅಂತಿಮ ಅವಕಾಶ; ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿ 2019ಕ್ಕೆ ಸಂಬಂಧಿಸಿದಂತೆ 1:10 ಅನುಪಾತದಲ್ಲಿ ಆಯ್ಕೆಯಾದ ಹಾಗೂ ದಾಖಲಾತಿ ಪರಿಶೀಲನೆಗೆ ಗೈರು ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ.

ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿ 1:10 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ದಾಖಲಾತಿ ಪರಿಶೀಲನಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಪೈಕಿ ದಾಖಲಾತಿ ಪರಿಶೀಲನೆಗೆ 63 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

ಪ್ರಸ್ತುತ ದಾಖಲಾತಿ ಪರಿಶೀಲನೆಗೆ ಅಂತಿಮ ಅವಕಾಶವನ್ನು ನೀಡಲಾಗಿದ್ದು, ಈ ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಎಲ್ಲಾ ಶೈಕ್ಷಣಿಕ ಮತ್ತು ಮೀಸಲಾತಿ ಪ್ರಮಾಣ ಪತ್ರಗಳ ಮೂಲ ದಾಖಲಾತಿ ಹಾಗೂ ಒಂದು ಸೆಟ್ ದೃಢೀಕೃತ ಸೆಟ್‌ಗಳೊಂದಿಗೆ ಜನವರಿ 31 ರೊಳಗಾಗಿ ಖುದ್ದಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಜೆಸಿಬಿ ಚಾಲನಾ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹಾಗೂ ಜೆಸಿಬಿ ಸಹಯೋಗದಲ್ಲಿ ಗ್ರಾಮಿಣ ಭಾಗದ ನಿರುದ್ಯೋಗಿ ಯುವಕರಿಗೆ 30 ದಿನಗಳ ಜೆಸಿಬಿ ಆಪರೇಟರ್ (ಚಾಲನಾ) ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 31ರ ತನಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ರಾಜ್ಯದ ಗ್ರಾಮೀಣ ಬಡ ಯುವಕರಾಗಿರಬೇಕು. ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜನವರಿ 31 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ವಿಳಾಸಕ್ಕೆ ಅಥವಾ 9449782425, 8050741744 ಗೆ ವ್ಯಾಟ್ಸಪ್ ನಂಬರಿಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವದು. ಆಸಕ್ತರು ಇದರ ಸದುಪಯೊಗ ಮಾಡಿಕೊಳ್ಳಬೇಕೆಂದು ಸಂಸ್ಥೆಯು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+