ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ

|
Google Oneindia Kannada News

ಬೆಂಗಳೂರು, ನವೆಂಬರ್ 24; ಬ್ಯಾಂಕ್ ಆಫ್ ಬರೋಡಾ 376 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 9, 2021 ಕೊನೆಯ ದಿನವಾಗಿದೆ.

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್, ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ 326 ಮತ್ತು ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್ 50 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ

Bank Of Baroda Recruitment Apply For 376 Post

ಬ್ಯಾಂಕ್ ಆಫ್ ಬರೋಡ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಬೋರ್ಡ್‌ನಿಂದ ಪಡೆದಿರಬೇಕು.

ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ

* ಅಭ್ಯರ್ಥಿಗಳು 2 ವರ್ಷದ ಅನುಭವವನ್ನು ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಯಲ್ಲಿ ಹೊಂದಿರಬೇಕು. ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜನ್ಸಿಗಳಲ್ಲಿ ಕೆಲಸ ಮಾಡಿರಬೇಕು.

* ಅಭ್ಯರ್ಥಿಗಳಿಗೆ ಕೆಲಸದ ಕುರಿತು ಸೂಕ್ತ ಮಾಹಿತಿ ಇರಬೇಕು. ಸ್ಥಳೀಯ ಭಾಷೆ/ ಮಾರುಕಟ್ಟೆ/ ಗ್ರಾಹಕರ ಕುರಿತು ಅರಿವು ಹೊಂದಿರಬೇಕು.

ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜೆನ್ಸಿಗಳಲ್ಲಿ ಕನಿಷ್ಠ 1.5 ವರ್ಷ ಕೆಲಸ ಮಾಡಿರಬೇಕು.

* ಅಭ್ಯರ್ಥಿಗಳಿಗೆ ಹೈ ವ್ಯಾಲ್ಯೂ ಫೈನಾಶಿಯಲ್ ಪ್ರಾಡಕ್ಟ್ ಸೇಲ್ಸ್/ ಸರ್ವೀಸ್ ನಲ್ಲಿ ಡಿಜಿಟಲ್ ಮೀಡಿಯಂನಲ್ಲಿ 1.5 ವರ್ಷದ ಅನುಭವ ಇರಬೇಕು.

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ 24 ವರ್ಷಗಳು, ಗರಿಷ್ಠ ವಯೋಮತಿ 35 ವರ್ಷ. ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ ವಯೋಮಿತಿ 23 ವರ್ಷಗಳು, ಗರಿಷ್ಠ ವಯೋಮಿತಿ 35 ವರ್ಷ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10, ಅಂಗವಿಕಲ (ಒಬಿಸಿ) ಅಭ್ಯರ್ಥಿಗಳಿಗೆ 13, ಅಂಗವಿಕಲ (ಎಸ್‌ಸಿ/ ಎಸ್‌ಟಿ) ಅಭ್ಯರ್ಥಿಗಳಿಗೆ 15, ನಿವೃತ್ತ ಯೋಧರು (ಸಾಮಾನ್ಯ) 5, ನಿವೃತ್ತ ಯೋಧರು (ಒಬಿಸಿ) 8, ನಿವೃತ್ತ ಯೋಧರು (ಎಸ್‌ಸಿ/ ಎಸ್‌ಟಿ) 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ರೂ. 100. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 600 ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ವೈಯಕ್ತಿಕ ಸಂದರ್ಶನ ಮತ್ತು ಗುಂಪು ಚರ್ಚೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ bankofbaroda.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಮಧ್ಯವರ್ತಿಗಳಿಂದ ದೂರವಿರಿ; ಕಲಬುರಗಿ ಜಿಲ್ಲೆಯ ಶಹಾಬಾದ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯಿರುವ 3 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 21 ಜನ ಅಂಗನವಾಡಿ ಸಹಾಯಕಿಯರ ಗೌರವಧನದ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಜಾರಿಯಲ್ಲಿದೆ.

ಕೆಲವು ಅನಾಮಧೆಯ ವ್ಯಕ್ತಿಗಳು / ಮಧ್ಯವರ್ತಿಗಳು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ನೇಮಕ ಮಾಡಿಸುವುದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಹಣ ಬೇಡಿಕೆ ಇಡುತ್ತಿರುವುದಾಗಿ ತಿಳಿದು ಬಂದಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರ ವಹಿಸಬೇಕೆಂದು ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Recommended Video

ಹಾರ್ದಿಕ್ ಪಾಂಡ್ಯಾಗೆ ಪಾಕ್ ಆಟಗಾರನ ಟಿಪ್ಸ್ | Oneindia Kannada

ಈ ಆಯ್ಕೆ ಪ್ರಕ್ರಿಯು ಜಿಲ್ಲಾಧಿಕಾರಿಗಳನ್ನೊಳಗೊಂಡಂತೆ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿರ ಆಯ್ಕೆ ಸಮಿತಿಯಲ್ಲಿ ಸದಸ್ಯರ ಅನುಮೋದನೆಯೊಂದಿಗೆ ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಂದ ಮೋಸ ಹೋಗಬಾರದೆಂದು ಮನವಿ ಮಾಡಲಾಗಿದೆ.

English summary
Apply for 376 various post in Bank of Baroda. Candidates can send applications till December 9, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X