ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಬೆಂಗಳೂರಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ನವೆಂಬರ್ 22; ಬ್ಯಾಂಕ್ ಆಫ್ ಬರೋಡಾ 4 ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ.

Business correspondent ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ 10 ರಿಂದ 15 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಬಿಎಂಟಿಸಿ ನೇಮಕಾತಿ; 10ನೇ ತರಗತಿ ಪಾಸಾದವರು ಅರ್ಜಿ ಹಾಕಿ ಬಿಎಂಟಿಸಿ ನೇಮಕಾತಿ; 10ನೇ ತರಗತಿ ಪಾಸಾದವರು ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ, ಬಿಇ, ಎಂಎಸ್‌ಸಿ, ಎಂಸಿಎ, ಎಂಬಿಎ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಹುಬ್ಬಳ್ಳಿ; ಕೆಲಸ ಖಾಲಿ ಇದೆ, ನವೆಂಬರ್ 26ರೊಳಗೆ ಅರ್ಜಿ ಹಾಕಿ ಹುಬ್ಬಳ್ಳಿ; ಕೆಲಸ ಖಾಲಿ ಇದೆ, ನವೆಂಬರ್ 26ರೊಳಗೆ ಅರ್ಜಿ ಹಾಕಿ

Bank Of Baroda Recruitment Apply For Business Correspondent Post

ನಿವೃತ್ತ ಬ್ಯಾಂಕ್ ಉದ್ಯೋಗಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ ನಿವೃತ್ತಿಯನ್ನು ಯಾವುದೇ ಪಿಎಸ್‌ಯು ಬ್ಯಾಂಕ್‌ನಲ್ಲಿ ಚೀಫ್ ಮ್ಯಾನೇಜರ್ ದರ್ಜೆಯಲ್ಲಿ ಕೆಲಸ ಮಾಡಿರಬೇಕು.

ಕೊಪ್ಪಳ, ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿಕೊಪ್ಪಳ, ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ಗರಿಷ್ಠ 65 ವರ್ಷಗಳು. 12 ತಿಂಗಳ ಒಪ್ಪಂದದಂತೆ ನೇಮಕಾತಿ ನಡೆಯಲಿದೆ. ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ. ಸ್ವಯಂ ದೃಢೀಕರಿಸಿದ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ; Regional Manager, Bank of Baroda Regional Office, Bangalore North, 4th Floor, Vijaya Towers, 41/2 M G Road, Bangalore 560001. (ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು)

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 7 ಸಂಖ್ಯೆಯ ಪ್ರೋಸೆಸ್ ಜಾರಿಕಾರ (ಪ್ರೋಸೆಸ್ ಸರ್ವರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಿಸೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನಿಷ್ಟ ವಯೋಮಿತಿ 18 ವರ್ಷ ಮತ್ತು ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/ 2ಬಿ/ 3ಎ/ 3ಬಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಗರಿಷ್ಠ ವರ್ಷ 40 ಆಗಿದೆ.

ವಿಧವೆ ಮತ್ತು ಅಂಗವಿಕಲರಿಗೆ 10 ವರ್ಷ ಸಡಿಲಿಕೆ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ 200 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಹಾಗೂ ಪ.ಜಾತಿ/ ಪ.ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಯ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ(ಲಿಪಿ ಮತ್ತು ಇತರೆ ಹುದ್ದೆಗಳ)(ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007 ರ ಪ್ರಕಾರ ನಡೆಯಲಿದೆ.

Recommended Video

ರಾಹುಲ್ ದ್ರಾವಿಡ್ ಪಂದ್ಯ ಮುಗಿದಾದ ನಂತರ ಹೇಳಿದ್ದೇನು | Oneindia Kannada

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮುಸ್ತಫ ಹುಸೇನ್ ಎಸ್. ಎ. ತಿಳಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ https://districts.ecourts.gov.in/shivamogga ಅಥವಾ http://karnatakajudiciary.kar.nic.in/districtrecruitment.asp

English summary
Bank of Baroda invited applications for Business correspondent post. Candidates can submit application till November 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X