ಬ್ಯಾಂಕ್ ಆಫ್ ಇಂಡಿಯಾದಲ್ಲಿ 158 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 26 : ಬ್ಯಾಂಕ್ ಆಫ್ ಇಂಡಿಯಾ 158 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳನ್ನು ಅರ್ಜಿಗಳನ್ನು ಸಲ್ಲಿಸಲು ಮೇ 5, 2018 ಕೊನೆಯ ದಿನವಾಗಿದೆ.
ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ಸ್ (ಕ್ರೆಡಿಟ್) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧವಿರಬೇಕು. ವೇತನ ಶ್ರೇಣಿ 23,700 ರಿಂದ 42,020 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಎಂಬಿಎ/ಪಿಜಿಡಿಬಿಎಂ/ಪಿಜಿಡಿಎಂ/ಪಿಜಿಬಿಎಂ/ಪಿಜಿಡಿಬಿಎ ಅಥವ ಚಾರ್ಟಡ್ ಅಕೌಂಟೆಂಟ್ ವಿಷಯದಲ್ಲಿ ಕೋರ್ಸ್ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/4/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್/ಕ್ರೆಡಿಟ್/ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಸಾಮಾನ್ಯ/ಇತರೆ ವರ್ಗದ ಅಭ್ಯರ್ಥಿಗಳಿ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications