ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 500 ಹುದ್ದೆಗಳು

ಬೆಂಗಳೂರು, ಫೆಬ್ರವರಿ 10; ಬ್ಯಾಂಕ್ ಆಫ್ ಮಹಾರಾಷ್ಟ್ರ Generalist ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 22 ಕೊನೆಯ ದಿನವಾಗಿದೆ.

ಒಟ್ಟು 500 Generalist ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. Generalist-2 400 ಮತ್ತು Generalist-3 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್‌ ಆಫ್ ಮಹಾರಾಷ್ಟ್ರ ನೇಮಕಾತಿ ನಿಯಮಗಳ ಅನ್ವಯ 48,170 ರಿಂದ 69,810 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.

Bank of Maharashtra Recruitment Apply For 500 Generalist Post

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ, ಸಿಎ, ಸಿಎಂಎ, ಸಿಎಫ್‌ಎ ಪದವಿ ಪಡೆದಿರಬೇಕು.

Generalist-2 ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಬಳಿಕ ವಾಣಿಜ್ಯ ಬ್ಯಾಂಕ್‌ಗಳಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಕ್ರೆಡಿಟ್/ ಬ್ರಾಂಚ್ ಹೆಡ್/ ಇನ್ ಚಾರ್ಜ್ ಹುದ್ದೆಗಳಲ್ಲಿ ಕೆಲಸ ಮಾಡಿರಬೇಕು.

Generalist-3 ಹುದ್ದೆಗಳಿಗೆ ವ್ಯಾಸಂಗದ ಬಳಿಕ 5 ವರ್ಷ ಯಾವುದೇ ವಾಣಿಜ್ಯ ಬ್ಯಾಂಕ್‌ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಅಭ್ಯರ್ಥಿ ಬ್ರಾಂಚ್ ಮ್ಯಾನೇಜರ್, ಹೆಡ್ ಔಟ್‌ ವಿಭಾಗದಲ್ಲಿ 1 ರಿಂದ 5 ವರ್ಷದ ತನಕ ಕಾರ್ಯ ನಿರ್ವಹಣೆ ಮಾಡಿರಬೇಕು.

Generalist-2 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ಮತ್ತು ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. Generalist-3 ಹುದ್ದೆಗಳಿಗೆ ಕನಿಷ್ಠ 25 ಮತ್ತು ಗರಿಷ್ಠ 38 ವರ್ಷದ ವಯೋಮಿತಿ ಇದೆ.

ವಯೋಮಿತಿ ಸಡಿಲಿಕೆ ವಿವರ; ಓಬಿಸಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ನಿವೃತ್ತ ಯೋಧರು 5 ವರ್ಷ, ಅಂಗವಿಕಲರು (ಸಾಮಾನ್ಯ/ಇಡ್ಲ್ಯುಎಸ್) 10 ವರ್ಷಗಳು. ಅಂಗವಿಕಲ (ಒಬಿಸಿ) 13 ವರ್ಷಗಳು, ಅಂಗವಿಕಲ (ಎಸ್‌ಸಿ/ ಎಸ್‌ಟಿ) 15 ವರ್ಷಗಳು.

ಅರ್ಜಿ ಶುಲ್ಕ; ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 118 ರೂ. ಶುಲ್ಕ ಪಾವತಿಸಬೇಕು. ಯುಅರ್/ ಇಡ್ಲ್ಯುಎಸ್/ ಓಬಿಸಿ ಅಭ್ಯರ್ಥಿಗಳು 1180 ರೂ. ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಪೇಮೆಂಟ್ ಮೂಲಕ ಮಾತ್ರ ಸಲ್ಲಿಸಬೇಕು.

ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು [email protected], [email protected] ಇ ಮೇಲ್ ವಿಳಾಸಕ್ಕೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ bankofmaharashtra.in

ಉಚಿತ ಕೌಶಲ್ಯ ತರಬೇತಿ; ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ವತಿಯಿಂದ 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಲ್ಲಿ 30 ದಿನಗಳ ಹೌಸ್ ವಾಯರಿಂಗ್ ಮತ್ತು ವಿದ್ಯುತ್ ಉಪಕರಣಗಳ ದುರಸ್ತಿಯ ಉಚಿತ ತರಭೇತಿಯನ್ನು ಪ್ರಾರಂಭಿಸಲಾಗುವುದು.

ಅಭ್ಯರ್ಥಿಗಳು ಫೆಬ್ರವರಿ 15ರ ಒಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಿಕೊಳ್ಳಬಹುದು. ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ, ನೀಡಲಾಗುವುದು.

ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳ, ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 9483485489, 9482188780, 08284 295307, 220807, 9743321062 ಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+