Bank Recruitment 2025: ರಾಜ್ಯದ 11 ಬ್ಯಾಂಕ್‌ಗಳಲ್ಲಿ ಉದ್ಯೋಗಾವಕಾಶ
Bank Recruitment 2025: ಬ್ಯಾಂಕ್‌ಗಳಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವೊಂದು ಸಿಕ್ಕಿದೆ. ರಾಜ್ಯದ 11 ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಿಲ್ಲೆಗಳಲ್ಲಿ? ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ಪ್ರಮುಖ 11 ಬ್ಯಾಂಕ್‌ಗಳಲ್ಲಿ ಒಟ್ಟು 1,170 ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ ಹಾಗೂ ದೇಶಾದ್ಯಂತ ಒಟ್ಟು 10,277 ಹುದ್ದೆಗಳಿಗೆ ಅರ್ಜಿ ಆಹ್ವ ಮಾಡಲಾಗಿದೆ. ಈ ಬಗ್ಗೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಆಯೋಗ ತನ್ನ ಸಾಮಾನ್ಯ ನೇಮಕಾತಿ ಪ್ರಕ್ರಿಯೆ ಅಧಿಸೂಚನೆ ಪ್ರಕಟಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಕೆನರಾ ಬ್ಯಾಂಕ್ ಅತೀ ಹೆಚ್ಚು ಅಂದರೆ, 675 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಯಾವ್ಯಾವ ಬ್ಯಾಂಕ್‌ನಲ್ಲಿ ಎಷ್ಟು ಹುದ್ದೆಗಳು ಖಾಲಿ?
* ಕೆನರಾ ಬ್ಯಾಂಕ್ - 675
* ಬ್ಯಾಂಕ್ ಆಫ್ ಬರೋಡಾ - 253
* ಬ್ಯಾಂಕ್ ಆಫ್ ಬರೋಡಾ - 253
* ಬ್ಯಾಂಕ್ ಆಫ್ ಇಂಡಿಯಾ - 45
* ಬ್ಯಾಂಕ್ ಆಫ್ ಮಹಾರಾಷ್ಟ್ರ - 20
* ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ - 47
* ಇಂಡಿಯನ್ ಓವರ್‌ಸೀಸ್ ಬ್ಯಾಂಕ್ - 44
* ಪಂಜಾಬ್ ನ್ಯಾಷನಲ್ ಬ್ಯಾಂಕ್ - 6
* ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ - 30
* ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ - 50
* ಒಟ್ಟು 1,170 ಹುದ್ದೆಗಳು
ಇನ್ನೂ ಇಡೀ ದೇಶಾದ್ಯಂತ 10,277 ಹುದ್ದೆಗಳು ಖಾಲಿಯಿವೆ. ಕರ್ನಾಟಕದಲ್ಲಿರುವ ಬ್ಯಾಂಕ್‌ಗಳಲ್ಲಿ ಕೆಲಸ ಮಾಡಲು ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಕನ್ನಡದಲ್ಲೂ ಪರೀಕ್ಷೆ ಬರೆಬಹುದು. ಇತರ ರಾಜ್ಯದ ಅಭ್ಯರ್ಥಿಗಳು ತಮ್ಮ ರಾಜ್ಯಕ್ಕೆ ಸಂಬಂಧಿಸಿದ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಆಗಸ್ಟ್ 21, 2025 ಆಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿ ಮಾನ್ಯತೆ ಪಡೆದ ವಿವಿಯಲ್ಲಿ ಡಿಗ್ರಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕಂಪ್ಯೂಟರ್ ತರಬೇತಿ ಪ್ರಮಾಣಪತ್ರ ಅಥವಾ ಪದವಿ ಅಥವಾ ಪಿಯು ಅಥವಾ ಪ್ರೌಢಶಾಲಾ ಮಟ್ಟದಲ್ಲಿ ಕಂಪ್ಯೂಟರ್ ಜ್ಞಾನ ಇರಬೇಕು.
ವಯೋಮಿತಿ ವಿವರ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ 28 ವರ್ಷ ಆಗಿರಬೇಕು. ಮೀಸಲಾತಿ ಆಧಾರದ ಮೇರೆಗೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಅರ್ಜಿ ಸಲ್ಲಿಕೆ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ, ಒಬಿಸಿ ಮತ್ತು ಇನ್ನಿತರ ವರ್ಗದ ಅಭ್ಯರ್ಥಿಗಳು 850 ರೂಪಾಯಿ ಮತ್ತು ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳು 175 ರೂಪಾಯಿ ಪಾವತಿಸಬೇಕು.
ಅರ್ಜಿ ಶುಲ್ಕಗಳ ವಿವರ
* ಸಾಮಾನ್ಯ, ಒಬಿಸಿ ಮತ್ತು ಇನ್ನಿತರ ವರ್ಗದ ಅಭ್ಯರ್ಥಿಗಳು - 850 ರೂಪಾಯಿ
* ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳು - 175 ರೂಪಾಯಿ
ಪರೀಕ್ಷಾ ಕೇಂದ್ರಗಳ ವಿವರ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಪರೀಕ್ಷೆ ಕೇಂದ್ರಗಳು ಇವೆ. ಅಭ್ಯರ್ಥಿಗಳಿಗೆ ಉತ್ತಮ ಕ್ರೆಡಿಟ್ ಇತಿಹಾಸ ಕಡ್ಡಾಯ ಆಗಿದೆ. ಅರ್ಜಿ ಸಲ್ಲಿಸುವವರು ಅಧಿಕೃತ ವೆಬ್‌ಸೈಟ್ ibps.inನಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಅರ್ಜಿ ಸಲ್ಲಿಕೆಗೆ ಏನೆಲ್ಲಾ ಬೇಕು?
* ಫೋಟೋ
* ಅಭ್ಯರ್ಥಿಗಳ ಎಡಗೈ ಹೆಬ್ಬೆರಳ ಗುರುತು,
* ಸ್ವಯಂ ಘೋಷಣಾ ಪತ್ರ
* ಅಂಕಪಟ್ಟಿ ಸ್ಕ್ಯಾನ್ ಪ್ರತಿ












Click it and Unblock the Notifications