BBMP job: ಬಿಬಿಎಂಪಿ ವ್ಯಾಪ್ತಿಯಲ್ಲಿ 444 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಹಿತಿ ತಿಳಿಯಿರಿ
ಬೆಂಗಳೂರು, ಫೆಬ್ರವರಿ, 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವ್ಯಾಪ್ತಿಯಲ್ಲಿ 444 ಹುದ್ದೆಗಳಿಗೆ ಅರ್ಹ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾವ್ಯಾವ ಹುದ್ದೆ, ಅರ್ಜಿ ಸಲ್ಲಿಸುವ ವಿಧಾನ ತಿಂಗಳ ವೇತನದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರಬೇಕಿರುವ ಆರೋಗ್ಯ ವಲಯದ ಪ್ರಮುಖ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ 444 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್‌ವ್ಯೂಗೆ ಪಾಲಿಕೆಯು ಅರ್ಹ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (NUHM), ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (NTEP), ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಅಂಧತ್ವ ನಿರ್ಮೂಲನಾ ಕಾರ್ಯಕ್ರಮದಡಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಾತಿ ನಡೆಯಲಾಗಿದೆ.
ವಾಕ್ ಇನ್ ಇಂಟರ್‌ವ್ಯೂಗೆ ಪಾಲಿಕೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಈ ತಿಂಗಳ 13ರಿಂದ 15ರವರೆಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆಯಡಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇತ್ರ ತಜ್ಞರು, ಮಕ್ಕಳ ತಜ್ಞರು, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್ಸ್, ಸ್ಟಾಪ್ ನರ್ಸ್ ಹಾಗೂ ಇತರ ಅರೆವೈದ್ಯ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲಾ ಹುದ್ದೆಗಳಿಗೂ ಕೇವಲ ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಅನ್ವಯ ಆಗಲಿದೆ ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications