ಬಿಬಿಎಂಪಿ ನೇಮಕಾತಿ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 4000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 9/10/2019 ಕೊನೆಯ ದಿನವಾಗಿದೆ.

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ 'ಡಿ' ವೃಂದದ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ವಿದ್ಯಾರ್ಹತೆಯನ್ನು ನಿಗದಿ ಮಾಡಿಲ್ಲ.

ಅರ್ಜಿ ಸಲ್ಲಿಸುವವರಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 17,000 ದಿಂದ 28, 950 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ.

BBMP Recruitment 2019 : Apply For 4000 Pourakarmika Post

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 200 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಬೆಂಗಳೂರು ನಗರದ ಯಾವುದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖಾ ಕಚೇರಿಗಳಲ್ಲಿ ಶುಲ್ಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪಾಲಿಕೆಯ ಎಲ್ಲಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ, ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ/ ಅಂಚೆ/ ಇತರೆ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಿದರೆ ಅವುಗಳನ್ನು ತಿರಸ್ಕರಿಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+