ಬಿಬಿಎಂಪಿ ನೇಮಕಾತಿ; 1322 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 25 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 1322 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಬಿಬಿಎಂಪಿ ಆಶಾ ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 8ನೇ ತರಗತಿ ಉತ್ತೀರ್ಣರಾಗಿರಬೇಕು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ ವಯೋಮಿತಿ 25 ರಿಂದ 45 ವರ್ಷಗಳು.

ಆಸಕ್ತ ಅಭ್ಯರ್ಥಿಗಳು ನವೆಂಬರ್ 24ರಿಂದ ಅರ್ಜಿಗಳನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳಿಸಬಹುದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ವಿಳಾಸ : Bruhat Bengaluru Mahanagara Palike, Office of Chief Medical Officer, Anex Building 3, BBMP Central Office, N.R Circle, Bengaluru - 560002
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications