BBMP Recruitment 2023: ಖಾಲಿ 3673 ಹುದ್ದೆಗಳಿಗೆ ಅರ್ಜಿ ಆಹ್ವಾನ, ಜ.30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಜನವರಿ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ತನ್ನಲ್ಲಿ ಖಾಲಿ ಇರುವ ಒಟ್ಟು 3673 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 3,673 ಪೌರ ಕಾರ್ಮಿಕರ ಗ್ರೂಪ್​-ಡಿ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದೆ. ಆಸಕ್ತ ಅಭ್ಯರ್ಥಿಗಳು ಇದೇ ತಿಂಗಳ ಜನವರಿ 30 ರೊಳಗೆ ಆಪ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ವಿಧಾನ, ಅರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವಿರ

ಸ್ಥಳೀಯ ವೃಂದದ ಹುದ್ದೆಗಳು ಕಲ್ಯಾಣ ಕರ್ನಾಟಕಲ್ಲಿ ಒಟ್ಟು 430 ಹುದ್ದೆಗಳು

ಉಳಿಕೆ ಮೂಲ ವೃಂದದ ಹುದ್ದೆಗಳು - 3243 ಹುದ್ದೆಗಳು ಖಾಲಿ ಇವೆ.

.

BBMP Recruitment 2023: BBMP was Invited Fulfill For 3673 Posts By Eligible

ಅರ್ಹತೆ ಏನು?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಥವಾ ಕಲ್ಯಾಣ ಇಲ್ಲವೇ ದಿನಗೂಲಿ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಡಿಮೆಯೆಂದರೂ ಎರಡು ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಇಂತಹ ಅರ್ಹ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅನುಭವ ಹೊರತು ಶೈಕ್ಷಣಿಕ ಅರ್ಹಯತೆ ಬಗ್ಗೆ ಬಿಬಿಎಂಪಿ ಅಧಿಸೂಚನೆಯಲ್ಲಿ ಪ್ರಸ್ತಾಪಿಸಿಲ್ಲ.

ವೇತನ- ವಯೋಮಿತಿ ಮಾಹಿತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಇದ್ದು, ಅದನ್ನು ಮೀರಿರಬಾರದು ಎಂದು ತಿಳಿಸಿದೆ. ಗ್ರೂಪ್​ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000 ರೂ.ನಿಂದ 28,950 ರೂ.ವರೆಗೆ ವೇತನ ನಿಗದಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ ಜನವರಿ 16

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 30

ಅಭ್ಯರ್ಥಿಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರ ಒಳಗೆ ಅರ್ಜಿ ಸಲ್ಲಿಸಬೇಕು.

BBMP Recruitment 2023: BBMP was Invited Fulfill For 3673 Posts By Eligible

ಅರ್ಜಿ ಸಲ್ಲಿಕೆ ವಿಧಾನ

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಅಗತ್ಯ ದಾಖಲೆಗಳೊಂದಿಗೆ ಬಿಬಿಎಂಪಿ ಆಯಾ ವಾರ್ಡ್‌ನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರ (ಘನತ್ಯಾಜ್ಯ ನಿರ್ವಹಣೆ) ಕಚೇರಿಗೆ ಸಲ್ಲಿಸಬೇಕು ಎಂದು ಅಧಿಸೂಚನೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+