BDA recruitment; ಬಿಡಿಎ ನೇಮಕಾತಿ, ಹುದ್ದೆ ಮತ್ತು ವೇತನ ವಿವರ
ಬೆಂಗಳೂರು, ನವೆಂಬರ್ 12; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಒಟ್ಟು 2 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 8 ಕೊನೆಯ ದಿನವಾಗಿದೆ.
ಬಿಡಿಎ ಬೆರಳಚ್ಚುಗಾರ 1, ಶೀಘ್ರಲಿಪಿಗಾರ 1 ಪರಿಶಿಷ್ಟ ಪಂಗಡದ ಹಿಂಬಾಕಿ (Backlog) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಭ್ಯರ್ಥಿಗಳನ್ನು The Karnataka State Civil Services (Unfilled vacancies reserved for the persons belonging to the Scheduled Castes and the Scheduled Tribes) (Special Recruitment) Rules, 2001 ರ ಅನ್ವಯ ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ, ವೇತನ; ಬೆರಳಚ್ಚುಗಾರ ಹುದ್ದೆಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಶೀಘ್ರಲಿಪಿಗಾರ ಹುದ್ದೆಗೆ 27,650-52,650 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರರಬಾರದು. ಮಾಜಿ ಸೈನಿಕರು/ ಅಂಗವಿಕಲರು/ ವಿಧವೆಯರಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುವುದು.
ಅರ್ಜಿ ಸಲ್ಲಿಕೆ ವಿಳಾಸ; ಆಸಕ್ತರು ನಿಗದಿತ ನಮೂನೆಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020 ಇವರಿಗೆ ಖುದ್ದಾಗಿ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಛೇರಿಗೆ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
* ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
* ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
* ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
* ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
* ಆಯ್ಕೆಗೊಂಡ ಅಭ್ಯರ್ಥಿಗಳು ಸರ್ಕಾರದ ಆದೇಶ ದಿನಾಂಕ 31/3/2006ರ ಅನ್ವಯ ನೂತನ ಪಿಂಚಣಿ ಯೋಜನೆಗೆ ಒಳಪಡುತ್ತಾರೆ.
* ನೇಮಕಾತಿ ಕುರಿತು ಪ್ರಾಧಿಕಾರದೊಂದಿಗೆ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ
* ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದೃಢೀಕೃತ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ, ಜಾತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.
* ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸುವ ಅಥವ ರದ್ದುಪಡಿಸುವ ಅಧಿಕಾರವನ್ನು ಪ್ರಾಧಿಕಾರ ಕಾಯ್ದಿರಿಸಿಕೊಂಡಿದೆ.












Click it and Unblock the Notifications