BDA Recruitment 2024: SDA & FDA ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಮಾರ್ಚ್ 06: ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗಾಗಿ ಗುಡ್ ನ್ಯೂಸ್ ಸಿಕ್ಕಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವ ಒಟ್ಟು 25 ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದೇ ಮಾರ್ಚ್ 24ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನೂ ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ವಿದ್ಯಾರ್ಹತೆ: ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಬೆಂಗಳೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಹುದ್ದೆಗಳ ಸಂಖ್ಯೆ : ಒಟ್ಟು 101 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 25 ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 76ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.
ಅರ್ಜಿ ಸಲ್ಲಿಕೆಯ ವಿಧಾನ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ. ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ). ಇನ್ನೂ ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕ:
ವಿವರವಾದ ಅಧಿಸೂಚನೆ ಪ್ರಕಟವಾಗುವ ದಿನಾಂಕ : ಮಾರ್ಚ್ 24, 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 24, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 23, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2024












Click it and Unblock the Notifications