BDA Recruitment: ಬಿಡಿಎನಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ
BDA Recruitment 2025: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಹುದ್ದೆಗಳು ಹೆಸರೇನು? ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಡಿಎ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಪ್ರಥಮ ದರ್ಜೆ ಸಹಾಯಕ (ಪ್ರಥಮ ದರ್ಜೆ ನ್ಯಾಯಾಲಯ ಗುಮಾಸ್ತ/ ಕಂದಾಯ ನಿರೀಕ್ಷಕ) ಹುದ್ದೆಗಳಿಗೆ ಒಟ್ಟು 4 ಸೀಟುಗಳಿದ್ದು, ದ್ವಿತೀಯ ದರ್ಜೆ ಸಹಾಯಕರಿಗಾಗಿ ಒಟ್ಟು 14 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ.

ವಿದ್ಯಾಭ್ಯಾಸ ಹಾಗೂ ವಯೋಮಿತಿ ವಿವರ: ಈ ಹುದ್ದೆಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಡಿಎ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕಾಗುತ್ತದೆ. ಇನ್ನೂ ವಯೋಮಿತಿ ವಿಚಾರಕ್ಕೆ ಬಂದರೆ, ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳಾಗಿರಬೇಕು. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ವಿವರ: ಅರ್ಜಿ ಶುಲ್ಕದ ವಿಚಾರಕ್ಕೆ ಬಂದ್ರೆ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ, ಎಸ್‌ಸಿ/ಎಸ್‌ಟಿ, ಮಾಜಿ ಸೇನಾ ಅಭ್ಯರ್ಥಿಗಳಿಗೆ 500 ರೂಪಾಯಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಸಂದರ್ಶನದ ಮೂಲಕ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಬಿಡಿಎ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಖಾಲಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
* ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಅಪ್ಡೇಟ್ ಮಾಡಿ
* ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ
* ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ
* ಕೊನೆಯದಾಗಿ ಎಲ್ಲಾ ಸರಿಯಾಗಿದೆಯೇ ಎಂದು ನೋಡಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ












Click it and Unblock the Notifications