ಬಿಡಿಎ ನೇಮಕಾತಿ; ಫೆಬ್ರವರಿ 25ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 11; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 6 ಹುದ್ದೆಗಳ ಭರ್ತಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ ಫೆಬ್ರವರಿ 25ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಕಾನೂನು ಅಧಿಕಾರಿ (ಲೀಗಲ್ ಆಫೀಸರ್) ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 6 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000 ರೂ, ವೇತನ ನಿಗದಿ ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಮತ್ತು ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

BDA Recruitment Apply For 6 Legal Officer Posts

ಇತರ ಅರ್ಹತೆಗಳು

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯ ನಿರ್ವಹಣೆ ಮಾಡಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರಾಗಿರಬೇಕು.

* ಅಭ್ಯರ್ಥಿ ಕಾನೂನು ಇಲಾಖೆ ಅಥವ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಯಾಗಿರಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಚೇರಿಯ ಕೆಲಸಕ್ಕಾಗಿ ಸಹಾಯಕ ಸಿಬ್ಬಂದಿಗಳು, ಕಾರು, ಚಾಲಕರನ್ನು ಒದಗಿಸಲಾಗುತ್ತದೆ.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ಅರ್ಜಿಗಳನ್ನು Commissioner, Bangalore Development Authority, Bengaluru, Karnataka ಇವರಿಗೆ ಫೆಬ್ರವರಿ 25ರೊಳಗೆ ಕಳಿಸಬೇಕು. ಅರ್ಜಿಗಳನ್ನು ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಕಳಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ; eng.bdabangalore.org

ಕೈಗಾರಿಕೋದ್ಯಮ ಅರಿವು; ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2022ರ ಫೆಬ್ರವರಿ ಮಾಹೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ಸೇವಾ, ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಲಭ್ಯವಿರುವ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳು, ಬ್ಯಾಂಕ್‍ಗಳಿಂದ ಸಿಗುವ ಸಾಲ ಸೌಲಭ್ಯಗಳು, ಕೈಗಾರಿಕಾ ನೀತಿಯನ್ವಯ ಸೌಲಭ್ಯಗಳು ಮುಂತಾದ ಯೋಜನೆಗಳ ಬಗ್ಗೆ ಈ ಅರಿವು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗುವುದು.

ಕೈಗಾರಿಕಾ, ಸೇವಾ ಘಟಕಗಳನ್ನು ಪ್ರಾರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಾರ್ಯಾಲಯದ ವತಿಯಿಂದ ನೋಂದಣಿ ಅರ್ಜಿ ಪಡೆದು ಭರ್ತಿ ಮಾಡಿ ಈ ಕಾರ್ಯಾಲಯಕ್ಕೆ ಫೆಬ್ರವರಿ, 19ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಹಾಗೂ ದೂರವಾಣಿ ಸಂಖ್ಯೆ 08272-228431/ 228746 ಅನ್ನು ಸಂಪರ್ಕಿಸಬಹುದು. ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು.

ತರಬೇತಿಗೆ ಅರ್ಜಿ ಆಹ್ವಾನ; ಕೊಪ್ಪಳ ತಾಲ್ಲೂಕಿನ ದದೇಗಲ್ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮ ಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೋರ್ಸ್‌ಗಳ ತರಬೇತಿಗಾಗಿ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಬಿಇ, ಮುಗಿಸಿರುವ ವಿದ್ಯಾರ್ಥಿಗಳಿಗೆ ಟರ್ನರ್, ಮಿಲ್ಲರ್, ಸಿಎನ್‌ಸಿ, ಟೂಲ್ ರೂಮ್ ಮೆಕ್ಯಾನಿಷ್ಟ್, ಡಿಸೈನ್ ಸಾಫ್ಟ್ವೇರ್(ಮೆಕ್ಯಾನಿಕಲ್) ಮತ್ತು ಡಾಟಾ ಎಂಟ್ರಿ ಆಪರೇಟರ್ ಕೋರ್ಸ್‌ಗಳು ಲಭ್ಯವಿದ್ದು, ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಪ್ರತಿ ತಿಂಗಳ ಕೊನೆಯ ವಾರದ ಮುಕ್ತಾಯದ ಒಳಗಾಗಿ ಕಛೇರಿಗೆ ಸಲ್ಲಿಸಬಹುದಾಗಿದೆ. ತಿಂಗಳ ಮೊದಲ ವಾರದಲ್ಲಿ ತರಬೇತಿಗಳು ಆರಂಭಗೊಳ್ಳುತ್ತವೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಯೋಜನೆ ಅನುಸಾರ ಪ್ರಮಾಣ ಪತ್ರ ನೀಡಲಾಗುವುದು ಮತ್ತು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ತರಬೇತಿ ಹೊಂದುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9902556110/ 9945846240ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+