ಪದವೀಧರರಿಗೆ ಬೆಂಗಳೂರು, ನೋಯ್ಡಾದಲ್ಲಿ ಕೆಲಸವಿದೆ
ಬೆಂಗಳೂರು, ಆಗಸ್ಟ್ 24 : ಬಿಇಸಿಐಎಲ್ 25 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 17, 2018 ಕೊನೆಯ ದಿನವಾಗಿದೆ.
ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 25 Monitor ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳುಗಳು ನೋಯ್ಡಾ, ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ಹಿಂದಿ ಮತ್ತು ಇಂಗ್ಲಿಶ್ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡಬೇಕು. ಕನಿಷ್ಠ ಒಂದು ವರ್ಷಗಳ ಕಾಲ ಮಾಧ್ಯಮ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.

ಆಯ್ಕೆಯಾದ ಅಭ್ಯರ್ಥಿಗಳಿಗೆ 28,635 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದೆ.
ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications