ಬಿಇಸಿಐಎಲ್ ನೇಮಕಾತಿ 2684 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 12 : ಬಿಇಸಿಐಎಲ್ 2684 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25/7/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಡೆಟ್ (ಬಿಇಸಿಐಎಲ್) Skilled Manpower, Un-Skilled Manpower ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
8ನೇ ತರಗತಿ ಉತ್ತೀರ್ಣ, ಐಟಿಐ, ಬಿ.ಟೆಕ್, ಬಿಕಾಂ, ಎಂ.ಕಾಂ, ಎಂಬಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ : ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ/ಓಬಿಸಿ ವರ್ಗದ ಅಭ್ಯರ್ಥಿಗಳು 500 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications