ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಇಎಲ್ ನಲ್ಲಿ ಇಂಜಿನಿಯರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28 : ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇಂಜಿನಿಯರ್ಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

5 ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಹುದ್ದೆ, 01 ಕಂಪ್ಯೂಟರ್ ಸೈನ್ಸ್, 02 ಮೆಕ್ಯಾನಿಕಲ್ ಒಟ್ಟು 8 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 07-10-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

BEL Recruitment 2017 Apply Online for Sr. Engineer Posts

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 32, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಮೇಲೆ ತಿಳಿಸಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿಟೆಕ್, ಹಾಗೂ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಈ ಬಗ್ಗೆ ಇನ್ನು ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

English summary
Bharat Electronics Limited (BEL) has given an employment notification for the recruitment of Sr. Engineer/ E-III vacancies on permanent basis. Eligible candidates may apply in the prescribed format on or before 07-10-2017
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X