ಬಿಇಎಲ್‌ನಲ್ಲಿ 147 ಹುದ್ದೆಗೆ ಅರ್ಜಿ ಆಹ್ವಾನ, ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಆಗಸ್ಟ್ 20 : ಬಿಇಎಲ್ 147 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 30, 2018 ಕೊನೆಯ ದಿನವಾಗಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ವೇತನ ಶ್ರೇಣಿ 23,000 ಪತ್ರಿ ತಿಂಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ (ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್/ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಎಂಡ್ ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ಕಂಪ್ಯೂಟರ್ ಸೈನ್ಸ್/ಇನ್‌ಫರ್ ಮೇಷನ್ ಸೈನ್ಸ್) ನಲ್ಲಿ ಪ್ರಥಮ ದರ್ಜೆಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಸೆಪ್ಟೆಂಬರ್ 2018)ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications