16 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಬಿಇಎಲ್, ಚೆನ್ನೈನಲ್ಲಿ ಕೆಲಸ

ಬೆಂಗಳೂರು, ನವೆಂಬರ್ 22 : ಬಿಇಎಲ್ ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 12, 2018 ಕೊನೆಯ ದಿನವಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ತಮಿಳುನಾಡಿನ ಚೆನ್ನೈನಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ಇನ್ ಮೆಕಾನಿಕಲ್/ಕಂಪ್ಯೂಟರ್ ಸೈನ್ಸ್/ಸಿವಿಎಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್&ಕಮ್ಯುನಿಕೇಷನ್/ಕಮ್ಯುನಿಕೇಷನ್/ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಿಕಲ್‌ ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

BEL recruitment 2018 : Apply for 16 Contract Engineer posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ನವೆಂಬರ್ 2018ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

ವೇತನ ಶ್ರೇಣಿ : ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23000 ತಿಂಗಳ ವೇತನ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 12ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+