ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

16 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಇಎಲ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11 : ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಇಎಲ್ ಮೆಡಿಕಲ್ ಆಫೀಸರ್, ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಸೇರಿದಂತೆ 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ನವದೆಹಲಿ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಕೆಲಸ ಮಾಡಬೇಕಾಗಿದೆ.

73 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಟಿಬಿಪಿ73 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಟಿಬಿಪಿ

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 15, 2018 ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅಧಿಸೂಚನೆ ಸ್ಪಷ್ಟಪಡಿಸಿದೆ.

ಕೊಂಕಣ ರೈಲ್ವೆಯಲ್ಲಿ ಉದ್ಯೋಗ, ಆನ್‌ಲೈನ್‌ನಲ್ಲಿ ಅರ್ಜಿ ಹಾಕಿಕೊಂಕಣ ರೈಲ್ವೆಯಲ್ಲಿ ಉದ್ಯೋಗ, ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸುವ ವಿಳಾಸವೂ ಇಲ್ಲಿದೆ.... ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಮುಂತಾದ ವಿವರಗಳು ಚಿತ್ರಗಳಲ್ಲಿವೆ ನೋಡಿ...

ವಿವಿಧ ಹುದ್ದೆ ಅರ್ಜಿ ಆಹ್ವಾನಿಸಿದ ಬಿಇಎಲ್‌, ಬೆಂಗಳೂರಲ್ಲಿ ಕೆಲಸವಿವಿಧ ಹುದ್ದೆ ಅರ್ಜಿ ಆಹ್ವಾನಿಸಿದ ಬಿಇಎಲ್‌, ಬೆಂಗಳೂರಲ್ಲಿ ಕೆಲಸ

ವಿದ್ಯಾರ್ಹತೆ

ವಿದ್ಯಾರ್ಹತೆ

ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಪೂರ್ಣಗೊಳಿಸಿರಬೇಕು. ಆಸ್ಪತ್ರೆಯಲ್ಲಿನ ಸೇವೆಗಳ ವಿಷಯದಲ್ಲಿ 2 ವರ್ಷದ ಅನುಭವ ಹೊಂದಿರಬೇಕು. Diploma in Otorhinolaryngology ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗೆ 3 ವರ್ಷದ ಪೂರ್ಣ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

21 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಶ್ಚಿಮ ರೈಲ್ವೆ21 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಶ್ಚಿಮ ರೈಲ್ವೆ

ವಯೋಮಿತಿ ವಿವರ

ವಯೋಮಿತಿ ವಿವರ

ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 33 ವರ್ಷಗಳು.

ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗೆ ಸಾಮಾನ್ಯ ವರ್ಗದವರಿಗೆ 28 ವರ್ಷಗಳು. ಓಬಿಸಿಯವರಿಗೆ 31 ವರ್ಷ, 33 ವರ್ಷ ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ.

ವೇತನ ಶ್ರೇಣಿ ವಿವರಗಳು

ವೇತನ ಶ್ರೇಣಿ ವಿವರಗಳು

ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 40000-140000 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗೆ 10000 ರೂ. ವೇತನ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಶುಲ್ಕ

ಅಭ್ಯರ್ಥಿಗಳಿಗೆ ಶುಲ್ಕ

ಮೆಡಿಕಲ್ ಆಫೀಸರ್ ಹುದ್ದೆಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗೆ 300 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

English summary
Bharat Electronics Limited (BEL) recruitment 2018-19. Notification has been released on official website for the recruitment of 16 vacancies. The candidate who is looking for Medical Officer, Engineering Assistant Trainee & Various vacancies can apply online before 15th October 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X