ಬಿಇಎಲ್‌ನಲ್ಲಿ 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ 02 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫೆಬ್ರವರಿ 7ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬಿಇಎಲ್ 27 ಡೆಪ್ಯೂಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್/ಎಎಂಐಇ ವಿದ್ಯಾರ್ಹತೆ ಹೊಂದಿರಬೇಕು. (ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯೂನಿಕೇಷನ್, ಎಲೆಕ್ಟ್ರಾನಿಕ್ಸ್ ಎಂಡ್ ಟೆಲಿ ಕಮ್ಯುನಿಕೇಷನ್, ಕಮ್ಯೂನಿಕೇಷನ್, ಟೆಲಿಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ಎಂಬಿಎ (ಮಾರ್ಕೆಂಟಿಗ್).

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. 7/2/2018ಕ್ಕೆ ಅನ್ವಯವಾಗುವಂತೆ. ವೇತನ 40,000. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7 ಫೆಬ್ರವರಿ 2018.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆರ್‌ಬಿಐನಲ್ಲಿ ಉದ್ಯೋಗವಿದೆ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನವಾಗಿದೆ. ನೇಮಕಾತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications