ಬಿಇಎಲ್ ನೇಮಕಾತಿ; ಸೆಪ್ಟೆಂಬರ್ 27ರ ತನಕ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 10: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಡೆಡ್ ಪ್ರಾಜೆಕ್ಟ್ ಇಂಜನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 27/9/2020 ಕೊನೆಯ ದಿನವಾಗಿದೆ.

ಪ್ರಾಜೆಕ್ಟ್ ಇಂಜಿನಿಯರ್ - 1 37 ಹುದ್ದೆ, ಟ್ರೇನಿ ಇಂಜಿನಿಯರ್ 54, ಪ್ರಾಜೆಕ್ಟ್ ಇಂಜಿನಿಯರ್ 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ. ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್‌ ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ & ಟೆಲಿ ಕಮ್ಯುನಿಕೇಷನ್.

BEL Recruitment 2020 Apply For Project And Trainee Engineer Post

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗೆ 25 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. 1/9/2020ಕ್ಕೆ ಅನ್ವಯವಾಗುವಂತೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ರೂ. 500, ಟ್ರೇನಿ ಇಂಜನಿಯರ್ ಹುದ್ದೆಗೆ 200 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಈ ಹುದ್ದೆಗಳನ್ನು 2 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಬಳಿಕ ಪ್ರಾಜೆಕ್ಟ್ ಅಗತ್ಯಕ್ಕೆ ತಕ್ಕಂತೆ ಗರಿಷ್ಠ 2 ವರ್ಷಗಳ ತನಕ ಮುಂದುವರೆಸಲು ಅವಕಾಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬಿಇಎಲ್ ವೆಬ್ ಸೈಟ್‌ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+