ಬಿಇಎಲ್ ನೇಮಕಾತಿ 2021: 305 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿವೆ
ಬೆಂಗಳೂರು, ಜನವರಿ 05: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 2021ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 305ಕ್ಕೂ ಟೆಕ್ನಿಕಲ್ ಅಪ್ರೆಂಟಿಸ್ ಗಳನ್ನು ನೇಮಿಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 19, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆ ಹೆಸರು: Technician (Diploma) Apprentices
ಒಟ್ಟು ಹುದ್ದೆಗಳು: 305
ಹುದ್ದೆಯ ತಾಣ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 19, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಡಿಪ್ಲೋಮಾ (ಅಧಿಸೂಚನೆಯನ್ನು ಪರಿಶೀಲಿಸಿ).
ವಯೋಮಿತಿ: ಅಭ್ಯರ್ಥಿಯ ವಯಸ್ಸ ಗರಿಷ್ಠ 22 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ನೇಮಕಾತಿ : ಅಂಕಗಳ ಸರಾಸರಿ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-01-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-01-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ