ಬಿಇಎಲ್ ನೇಮಕಾತಿ 2021: ಹಿರಿಯ ಇಂಜಿನಿಯರಿಂಗ್ ಹುದ್ದೆಗಳಿವೆ
ಬೆಂಗಳೂರು, ನವೆಂಬರ್ 20: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 12ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 08, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆ ಹೆಸರು: Senior Engineer E-III, Deputy Manager E-IV
ಒಟ್ಟು ಹುದ್ದೆಗಳು: 12
Senior Engineer E-III: 10 ಹುದ್ದೆ
Deputy Manager E-IV: 2 ಹುದ್ದೆ
ಉದ್ಯೋಗ ಸ್ಥಳ: ಬೆಂಗಳೂರು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 08, 2021.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಪದವಿ (ಅಧಿಸೂಚನೆಯನ್ನು ಪರಿಶೀಲಿಸಿ).
ಹಿರಿಯ ಇಂಜಿನಿಯರ್ - ಇ-III: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿಇ/ ಬಿ. ಟೆಕ್/ ಎಂ.ಇ/ಎಂ.ಟೆಕ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್/ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯೂನಿಕೇಷನ್/ಟೆಲಿಕಮ್ಯೂನಿಕೇಷನ್/ ಏರೋಸ್ಪೇಸ್/ಕಮ್ಯೂನಿಕೇಷನ್/ ಏರೋನಾಟಿಕಲ್ ಇಂಜಿನಿಯರಿಂಗ್/ ಮೆಕಾಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ ಮೆಕ್ಯಾನಿಕಲ್ ಮೆಕಾಟ್ರಾನಿಕ್ಸ್)
ಡೆಪ್ಯುಟಿ ಮ್ಯಾನೇಜರ್ ಇ-IV: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪೂರ್ಣಾವಧಿ ಬಿಇ/ ಬಿ. ಟೆಕ್/ ಎಂ.ಇ/ಎಂ.ಟೆಕ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್/ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯೂನಿಕೇಷನ್/ಟೆಲಿಕಮ್ಯೂನಿಕೇಷನ್/ ಏರೋಸ್ಪೇಸ್/ಕಮ್ಯೂನಿಕೇಷನ್/ ಏರೋನಾಟಿಕಲ್ ಇಂಜಿನಿಯರಿಂಗ್).
ವಯೋಮಿತಿ:
ಹಿರಿಯ ಇಂಜಿನಿಯರ್: ಕನಿಷ್ಠ 25 ವರ್ಷ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಹಿಂದುಳಿದ ವರ್ಗ (ಒಬಿಸಿ) ದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿಯನ್ನು ನಿಯಮಾನುಸಾರ ಸಿಗಲಿದೆ.
ನೇಮಕಾತಿ: ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಹಿರಿಯ ಇಂಜಿನಿಯರ್:
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ: 750 ರು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ, ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಮೂಲಕ ರಿಮೆಟ್ ಮಾಡತಕ್ಕದ್ದು.
ನೇಮಕಾತಿ ಪ್ರಕ್ರಿಯೆ:
ಮೆರಿಟ್ ಆಧಾರದ ಮೇಲೆ, ಅನುಭವ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ. ಬಿಇಎಲ್ ಅಧಿಕೃತ ವೆಬ್ ತಾಣದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ.
ಪ್ರಮುಖ ದಿನಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08/12/2021
ಅರ್ಜಿ ಸಲ್ಲಿಸುವ ವಿಧಾನ:
* ಬಿ.ಇ.ಎಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ಹಿರಿಯ ಇಂಜಿನಿಯರ್/ಡೆಪ್ಯುಟಿ ಮ್ಯಾನೇಜರ್ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ (https://www.bel-india.in/Documentviews.aspx?fileName=final%20Web%20Adv%20ENG-16-11-2021.pdf)