BEL Recruitment 2022: ಬಿಇಎಲ್‌ನಲ್ಲಿ ಟ್ರೈನಿ ಇಂಜಿನಿಯರ್ ಹುದ್ದೆಗಳಿವೆ
ಬೆಂಗಳೂರು, ಜುಲೈ 19: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ.150ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 03, 2022ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆ ಹೆಸರು: Project Engineer I, Trainee Engineer I
ಒಟ್ಟು ಹುದ್ದೆಗಳು:150
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 03, 2022
ಸಂಬಳ ನಿರೀಕ್ಷೆ:
Project Engineer: 30,000 ಪ್ರತಿ ತಿಂಗಳು
Trainee Engineer: 40,000 ಪ್ರತಿ ತಿಂಗಳು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಬಿಇ/ ಬಿ. ಟೆಕ್ ಪದವಿ (ಅಧಿಸೂಚನೆಯನ್ನು ಪರಿಶೀಲಿಸಿ).
ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪೂರ್ಣಾವಧಿ ಬಿಇ/ ಬಿ. ಟೆಕ್/ ಎಂ.ಇ/ಎಂ.ಟೆಕ್ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್/ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯೂನಿಕೇಷನ್) ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ವಿನಾಯತಿ ಸಿಗಲಿದೆ.

ಪ್ರಾಜೆಕ್ಟ್ ಇಂಜಿನಿಯರ್: ಕನಿಷ್ಠ 55% ಅಂಕಗಳು ಮತ್ತು ಕನಿಷ್ಠ 02 ವರ್ಷಗಳ ಅನುಭವದೊಂದಿಗೆ ಇಂಜಿನಿಯರಿಂಗ್‌ನ ಸಂಬಂಧಿತ ವಿಭಾಗಗಳಲ್ಲಿ AICTE ಅನುಮೋದಿತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣ ಸಮಯದ BE/ B.Tech ಇಂಜಿನಿಯರಿಂಗ್ (4 ವರ್ಷಗಳು) ಕೋರ್ಸ್.
ಟ್ರೈನಿ ಇಂಜಿನಿಯರ್: ಕನಿಷ್ಠ 55% ಅಂಕಗಳು ಮತ್ತು ಕನಿಷ್ಠ 01 ವರ್ಷಗಳ ಅನುಭವದೊಂದಿಗೆ ಇಂಜಿನಿಯರಿಂಗ್ ಸಂಬಂಧಿತ ವಿಭಾಗಗಳಲ್ಲಿ AICTE ಅನುಮೋದಿತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣ ಸಮಯದ BE/ B.Tech ಇಂಜಿನಿಯರಿಂಗ್ (4 ವರ್ಷಗಳು) ಕೋರ್ಸ್.
ವಯೋಮಿತಿ:
ಪ್ರಾಜೆಕ್ಟ್ ಇಂಜಿನಿಯರ್: ವಯೋಮಿತಿ: 32 ವರ್ಷ
ಟ್ರೈನಿ ಇಂಜಿನಿಯರ್: 28 ವರ್ಷ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಹಿಂದುಳಿದ ವರ್ಗ (ಒಬಿಸಿ) ದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿಯನ್ನು ನಿಯಮಾನುಸಾರ ಸಿಗಲಿದೆ.
ಅರ್ಜಿ ಶುಲ್ಕ:
ಟ್ರೈನಿ ಇಂಜಿನಿಯರ್:
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ: 472ರು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ, ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಟ್ರೈನಿ ಇಂಜಿನಿಯರ್:
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ: 177ರು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ, ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಮೂಲಕ ರಿಮೆಟ್ ಮಾಡತಕ್ಕದ್ದು.
ನೇಮಕಾತಿ ಪ್ರಕ್ರಿಯೆ:
ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ,ಮೆರಿಟ್ ಆಧಾರದ ಮೇಲೆ, ಅನುಭವ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ. ಬಿಇಎಲ್ ಅಧಿಕೃತ ವೆಬ್ ತಾಣದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ.
ಪ್ರಮುಖ ದಿನಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03/08/2022
ಅರ್ಜಿ ಸಲ್ಲಿಸುವ ವಿಧಾನ:
* ಬಿ.ಇ.ಎಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ(bel-india.in)ದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ ಅರ್ಜಿ ನಮೂನೆ(Application for Project Engineer/ Trainee Engineer)ಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications