BEL Recruitment 2023: ಬೆಂಗಳೂರಿನಲ್ಲೇ ಭರ್ಜರಿ ಉದ್ಯೋಗ, ಅ.30ರಂದು ಸಂದರ್ಶನದಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಅಕ್ಟೋಬರ್ 23: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇದೇ ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯಲ್ಲಿ ಅನೇಕ ಮ್ಯಾನೇಜ್ಮೆಂಟ್ ಇಂಡಸ್ಟ್ರಿಯನ್ ಟ್ರೈನಿ ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 30 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಕೆಗೂ ಮೊದಲು ನೇಮಕಾತಿ ಪ್ರಕ್ರಿಯೆ ಕುರಿತು ತಿಳಿದುಕೊಳ್ಳಿ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಇಂಡಸ್ಟ್ರಿಯನ್ ಟ್ರೈನಿ
ಮಾಸಿಕ ವೇತನ: 18,000 ರಿಂದ 20,000 ರೂಪಾಯಿ
ಸಂದರ್ಶನ ದಿನ: ಅಕ್ಟೋಬರ್ 30
ಪೋಸ್ಟಿಂಗ್: ಬೆಂಗಳೂರು
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಇಂಟರ್ ಅಥವಾ ICWA ಇಂಟರ್ ಪೂರ್ಣಗೊಳಿಸಿರಬೇಕು ಎಂದು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ
ಬಿಎಎಲ್ ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು ವಯಸ್ಸು ಇದೇ ಅಕ್ಟೋಬರ್ 30 ಗರಿಷ್ಠ 25 ವರ್ಷ ಮೀರಿರಬಾರದು ಎಂದು ನಿಮಯ ಇದೆ. ಇದರಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ, ಲೋಕೋಪಯೋಗಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳು ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿಯೇ ಮಾಸಿಕ 18,000-20,000 ಸಹಿತಿ ಪೋಸ್ಟಿಂಗ್ ನೀಡಲಾಗುವುದು ಬಿಎಎಲ್ ತಿಳಿಸಿದೆ.
ಸಂದರ್ಶನ ನಡೆಯುವ ಸ್ಥಳದ ವಿವರ ನೋಡುವುದಾದರೆ, ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ, ಬೆಂಗಳೂರು-560090 ಇಲ್ಲಿಗೆ ಆಸಕ್ತರು ನಿಗದಿತ ದಿನಾಂಕದಂದು ತೆರಳಬೇಕು ಎಂದು ಸಂಸ್ಥೆ ತಿಳಿಸಿದೆ.











Click it and Unblock the Notifications