BEL Recruitment 2023: ಬೆಂಗಳೂರಿನಲ್ಲೇ 50,000 ವೇತನ ಬಿಇಎಲ್ ಉದ್ಯೋಗಕ್ಕೆ ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಜೂನ್ 05: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 15ರೊಳಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಅಧಿಸೂಚನೆ ತಿಳಿಸಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಕಂಪನಿಯಲ್ಲಿ ಒಟ್ಟು ಎರಡು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಅರ್ಹ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದ. ಅರ್ಜಿ ಸಲ್ಲಿಕೆಗೂ ಮುನ್ನ ವಿದ್ಯಾರ್ಹತೆ, ವೇತನ, ವಯೋಮಿತಿ ಸೇರಿದಂತೆ ಹುದ್ದೆಗಳ ಇತರೆ ಮಾಹಿತಿ ಇಲ್ಲಿ ತಿಳಿಯಬಹುದು.

ಹುದ್ದೆಯ ಪೂರ್ಣ ವಿವರ
ಸಂಸ್ಥೆ ಹೆಸರು- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಖಾಲಿ ಹುದ್ದೆ- ಎರಡು
ಯಾವ ಹುದ್ದೆ- ಪ್ರಾಜೆಕ್ಟ್ ಎಂಜಿನಿಯರ್
ಉದ್ಯೋಗದ ಸ್ಥಳ - ಬೆಂಗಳೂರು
ವಿದ್ಯಾರ್ಹತೆ ಮತ್ತು ವೇತನ ಮಾಹಿತಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದಬಿಇ/ಬಿ.ಟೆಕ್ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಇನ್ನೂ ನೇಮಕಾತಿಯಲ್ಲಿ ಆಯ್ಕೆಯಾಗುವವರಿಗೆ ಮಾಸಿಕ 40,000 ದಿಂದ 50,000 ರೂಪಾಯಿವರೆಗೆ ನಿಗದಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ವಯೋಮಿತಿ ಮತ್ತು ಸಡಿಲಿಕೆ ವಿವರ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2023 ಮೇ 1ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. PWD ಅಭ್ಯರ್ಥಿಗಳಿಗೆ 10 ವರ್ಷ ಸಡಲಿಕೆ ಇದೆ.

ಆಯ್ಕೆ ಪ್ರಕ್ರಿಯೆ- ಅರ್ಜಿ ಶುಲ್ಕ ವಿವರ
ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಇರುತ್ತದೆ. ನಂತರ ಸಂದರ್ಶನ ಹಮ್ಮಿಕೊಳ್ಳಲಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ಅರ್ಜಿ ತುಂಬರು 400 ರೂಪಾಯಿಯನ್ನು ಆನ್‌ಲೈನ್ ನಲ್ಲಿ ಪಾವತಿಸಬೇಕಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಜೂ್ 15ರೊಳಗೆ ಅಗತ್ಯ ದಾಖಲಾತಿ ಸಹಿತಿ 'ಸೀನಿಯರ್ ಡೆಪ್ಯುಟಿ ಜನರಲ್ ಮ್ಯಾನೇಜರ್ (HR/ಮಿಲಿಟರಿ ಕಮ್ಯುನಿಕೇಷನ್ಸ್ & MR) ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್,
ಬೆಂಗಳೂರು - 560013 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ https://bityl.co/J3jL ವೆಬ್‌ಸೈಟ್‌ಗೆ ಭೇಟಿ ನೀಡಿ ಎಂದು ತಿಳಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications