ವಿವಿಧ ಹುದ್ದೆ ಅರ್ಜಿ ಆಹ್ವಾನಿಸಿದ ಬಿಇಎಲ್‌, ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಅಕ್ಟೋಬರ್ 09 : ಬಿಇಎಲ್ 2 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2018.

ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ (ಬಿಇಎಲ್) ಡೆಪ್ಯೂಟಿ ಮ್ಯಾನೇಜರ್ 1 ಮತ್ತು ಸೀನಿಯರ್ ಇಂಜಿನಿಯರ್ 1 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ಅಥವ ತತ್ಸಮಾನ ಕೋರ್ಸ್‌ಗಳನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

BEL recruitment apply for Dy. Manager and Senior Engineer post

ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 36 ವರ್ಷ, ಸೀನಿಯರ್ ಇಂಜಿನಿಯರ್ ಹುದ್ದೆಗೆ 32 ವರ್ಷದ ವಯೋಮಿತಿಯನ್ನು ನಿಗದಿ ಮಾಡಿರಬೇಕು. ಅಕ್ಟೋಬರ್ 1, 2018ಕ್ಕೆ ಅನ್ವಯವಾಗುವಂತೆ.

ಓಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವವರು ಆನ್‌ಲೈನ್ ಮೂಲಕ ಅಥವ ಎಸ್‌ಬಿಐ ಶಾಖೆಯಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕವಿದೆ. ಉಳಿದ ವರ್ಗಕ್ಕೆ ಶುಲ್ಕ ವಿನಾಯಿತಿ ಇದೆ.

ವೇತನ ಶ್ರೇಣಿ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 600000-180000 ಮತ್ತು ಸೀನಿಯರ್ ಇಂಜಿನಿಯರ್ ಹುದ್ದೆಗೆ 50000-160000 ವೇತನ ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಅಕ್ಟೋಬರ್ 31ರೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ
The Manager (HR/A&F)
Bharat Electronics Limited
Jalahalli Post
Bengaluru - 560013

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+