ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಇಎಲ್, ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಅಕ್ಟೋಬರ್ 29 : ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ 4 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 20, 2018 ಕೊನೆಯ ದಿನವಾಗಿದೆ.

ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್ ಮತ್ತು ಕಂಪನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗಿದೆ.

ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್ 3, ಕಂಪನಿ ಸೆಕ್ರೆಟರಿ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವ ವಿವಿಯಿಂದ ಪೂರ್ಣಗೊಳಿಸಿರಬೇಕು. ಐಸಿಎಸ್‌ಐ ಸದಸ್ಯರಾಗಿರಬೇಕು.

BEL recruitment Product Support Engineer and Company Secretary post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ 5, ಓಬಿಸಿ 3 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ಶ್ರೇಣಿ 55000-75000 ಪ್ರತಿ ತಿಂಗಳು.

ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ನಿಗದಿತ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಅಗತ್ಯ ದಾಖಲಾತಿಗಳ ಜೊತೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

HEAD HR
BEL-THALES Systems Limited
CNP Area
BEL Industrial Estate
Jalahalli Post
Bengaluru - 560013

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+