ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜನವರಿ 08 : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು
21/01/2020 ಕೊನೆಯ ದಿನವಾಗಿದೆ.
ಸ್ಟೆನೋಗ್ರಾಫರ್, ಟೈಪಿಸ್ಟ್ ಸೇರಿ 55 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿಯಲ್ಲಿ ಕೆಲಸ ಮಾಡಬೇಕಿದೆ.
ಮಾನ್ಯತೆ ಪಡೆದ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಸೀನಿಯರ್ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಸೀನಿಯರ್ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಕನ್ನಡ/ಇಂಗ್ಲಿಶ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಗಳು ಜನವರಿ 6ರಿಂದ 21ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications