ಬೆಳಗಾವಿಯಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 21ರ ರೊಳಗೆ ಅರ್ಜಿ ಹಾಕಿ
ಬೆಳಗಾವಿ, ಜುಲೈ 25; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಬೆಳಗಾವಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 21/8/2023 ಕೊನೆಯ ದಿನವಾಗಿದೆ.
ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಒಟ್ಟು 13 ಹುದ್ದೆಗಳಿದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 27,650 ರಿಂದ 52,650 ರೂ. ತನಕ ವೇತನ ನಿಗದಿ ಮಾಡಲಾಗಿದೆ. ವಿಶೇಷ ಭತ್ಯೆಗಳನ್ನು ಸಹ ನೀಡಲಾಗುತ್ತದೆ. ಮಹಿಳೆ 3, ಗ್ರಾಮೀಣ 5, ಯೋಜನಾ ನಿರಾಶ್ರಿತ 1, ಅಂಗವಿಕಲರು 2, ಮಾಜಿ ಸೈನಿಕರು 1 ಎಂದು ಹುದ್ದೆಗಳನ್ನು ವರ್ಗೀಕರಣ ಮಾಡಲಾಗಿದೆ.
ಶೈಕ್ಷಣಿಕರ ವಿದ್ಯಾರ್ಹತೆ ಮಾಹಿತಿ; ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮಾ ಇನ್ ಕಮರ್ಷಿಯಲ್ ಫ್ಯಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸಿನಿಯ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಹತಾ ಪರೀಕ್ಷೆ; ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ/ ಇಂಗ್ಲೀಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಅಥವಾ ಗಣಕ ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಸಾಮಾನ್ಯ ವರ್ಗ, ಪ್ರವರ್ಗ 2ಎ/ 2ಬಿ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣಾ ನಿಯಮ 1997ರ ಪ್ರಕಾರ 2 ವಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಈ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು).
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮೀತಿ 21/8/2023ರಂದು ಸಾಮಾನ್ಯ ವರ್ಗಕ್ಕೆ 35 ವರ್ಷಗಳು. ಪ್ರವರ್ಗ-IIA, IIB, IIIA 38 ವರ್ಷಗಳು. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ 40 ವರ್ಷಗಳನ್ನು ಮೀರಬಾರದು.
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಈ ಬಗ್ಗೆ ಮೀಸಲಾತಿ ಕೋರಿದಲ್ಲಿ ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ ಪಡೆದಿರಬೇಕು ಹಾಗೂ ಅದನ್ನು ಅರ್ಜಿ ತುಂಬುವ ಸಮಯದಲ್ಲಿ ತಪ್ಪದೇ ಅಪಲೋಡ್ ಮಾಡಬೇಕು.
ಅರ್ಜಿಗಳನ್ನು ಸಲ್ಲಿಸಲು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್












Click it and Unblock the Notifications