ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ ಬಿಇಎಂಎಲ್
ಬೆಂಗಳೂರು, ಜುಲೈ 16 : ಬಿಇಎಂಎಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 24 ಜುಲೈ 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಭಾರತ್ ಅರ್ಥ್ ಮೂವರ್ಸ್ ಲಿಮಿುಟೆಡ್ (ಬಿಇಎಂಎಲ್) ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅ ಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್‌ನಲ್ಲಿನಲ್ಲಿ ಪ್ರಥಮ ದರ್ಜೆಯಲ್ಲಿ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ ವಿವರ
* ಸೀನಿಯರ್ ಮ್ಯಾನೇಜರ್ 40
* ಮ್ಯಾನೇಜರ್ 37
* ಅಸಿಸ್ಟೆಂಟ್ ಮ್ಯಾನೇಜರ್ 33
* ಇಂಜಿನಿಯರ್ ಹುದ್ದೆಗೆ 29 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 24 ಜುಲೈ 2018ಕ್ಕೆ ಅನ್ವಯವಾಗುವಂತೆ.
ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ
* ಸೀನಿಯರ್ ಮ್ಯಾನೇಜರ್ : 29100 ರಿಂದ 54,500 ಪ್ರತಿ ತಿಂಗಳು
* ಮ್ಯಾನೇಜರ್ : 24900 ರಿಂದ 50500 ಪ್ರತಿ ತಿಂಗಳು
* ಅಸಿಸ್ಟೆಂಟ್ ಮ್ಯಾನೇಜರ್ : 20600 ರಿಂದ 465000
* ಇಂಜಿನಿಯರ್ : 16400 ರಿಂದ 40500 ಪ್ರತಿ ತಿಂಗಳು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications