ಬಿಇಎಂಎಲ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಮಾರ್ಚ್ 28 : ಬಿಇಎಂಎಲ್ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 9/4/2019 ಕೊನೆಯ ದಿನವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾರತ್ ಅರ್ತ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಇಂಜಿನಿಯರ್ (ಡಿಸೈನ್) ಗ್ರೇಡ್ 2 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬಿಇ/ಬಿಟೆಕ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 29 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 40,000-1,40,000 ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 26 ರಿಂದ ಏಪ್ರಿಲ್ 9ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? : ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಸಹಿ ಹಾಕಿ ವಿಳಾಸಕ್ಕೆ ಅಂಚೆ ಮೂಲಕ ಕಳಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ :
MANAGER (HR),
Recruitment Cell, BEML Soudha,
No.23/1, 4th Main Road, S.R Nagar,
Bangalore -560027
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications