ಬೆಂಗಳೂರು: SSLC ಆದವರಿಗೆ ಕೋರ್ಟ್‌ನಲ್ಲಿ ಕೆಲಸ, ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು, ಫೆಬ್ರವರಿ 19: ಬೆಂಗಳೂರು ಗ್ರಾಮಾಂತರದ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿಯಿದ್ದು, ಆಸಕ್ತರು ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2024ರ ಹುದ್ದೆಯ ವಿವರಗಳು ಇಲ್ಲಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಜವಾನ(Peon) ಹಾಗೂ ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು ಹಾಗೂ ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಮಾರ್ಚ್ 20, 2024ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಹಾಗೂ ಅರ್ಜಿಯ ವಿವರ ಇಲ್ಲಿದೆ.
ಸಂಸ್ಥೆಯ ಹೆಸರು : ಬೆಂಗಳೂರು ಗ್ರಾಮಾಂತರ ಇಕೋರ್ಟ್ ( ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ )
ಹುದ್ದೆಗಳ ಸಂಖ್ಯೆ: 58
ಉದ್ಯೋಗ ಸ್ಥಳ: ಬೆಂಗಳೂರು
ಪೋಸ್ಟ್ ಹೆಸರು: ಜವಾನ(Peon), ಟೈಪಿಸ್ಟ್
| ಪೋಸ್ಟ್ | ಪೋಸ್ಟ್‌ಗಳ ಸಂಖ್ಯೆ | ವಿದ್ಯಾರ್ಹತೆ | ಸಂಬಳ (ತಿಂಗಳಿಗೆ) |
| ಜವಾನ(Peon) | 28 | SSLC | 17,000-28,950/- |
| ಟೈಪಿಸ್ಟ್ | 30 | ಪಿಯುಸಿ, ಡಿಪ್ಲೋಮಾ | 21,400-42,000/- |
ಮೆರಿಟ್ ಪಟ್ಟಿ ಮತ್ತು ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಫೆಬ್ರವರಿ 16ರಿಂದ ಆರಂಭವಾಗಿದ್ದು, ಮಾರ್ಚ್ 20, 2024 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ..?
*ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ತಿಳಿದುಕೊಳ್ಳಬೇಕು
*ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿರಿಸಿಕೊಂಡಿರಬೇಕು.
*ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಜವಾನ, ಟೈಪಿಸ್ಟ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.
*ತಮ್ಮ ಇತ್ತೀಚಿನ ಫೋಟೋ, ಜೊತೆಗೆ ಅಗತ್ಯ ಪ್ರಮಾಣ ಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
*ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
*ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಸಬ್ಮೀಟ್ ಬಟನ್ ಅನ್ನು ಕ್ಲಿಕ್ ಮಾಡಿ. ಹಾಗೂ ಅರ್ಜಿ ಸಂಖ್ಯೆಯನ್ನು ದಾಖಲಿಸಿಕೊಳ್ಳಿ.
*ಹೆಚ್ಚಿನ ಮಾಹಿತಿಗಾಗಿ bengalururural.dcourts.gov.in ಹಾಗೂ https://bengalururural.dcourts.gov.in/online-recruitment/ಗೆ ಭೇಟಿ ನೀಡಿ.












Click it and Unblock the Notifications