ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಮೇ 24; ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 6 ಕೊನೆಯ ದಿನವಾಗಿದೆ.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗ್ರಾಮ ಪಂಚಾಯಿತಿ ನೇಮಕಾತಿ ಸೇವಾ ನಿಯಮಗಳ ಅನ್ವಯ ನೇರವಾಗಿ ನೇಮಕಾತಿ ಮಾಡಲಾಗುತ್ತಿದೆ.

ಕರ್ನಾಟಕ ಶಿಕ್ಷಕರ ಹುದ್ದೆ ನೇಮಕಾತಿ 2022: ಐವರಲ್ಲಿ ಒಬ್ಬರಿಗೆ ಉದ್ಯೋಗ ಖಚಿತಕರ್ನಾಟಕ ಶಿಕ್ಷಕರ ಹುದ್ದೆ ನೇಮಕಾತಿ 2022: ಐವರಲ್ಲಿ ಒಬ್ಬರಿಗೆ ಉದ್ಯೋಗ ಖಚಿತ

ಕರವಸೂಲಿಗಾರರು 4, ಡಾಟಾ ಎಂಟ್ರಿ ಆಪರೇಟರ್ 4, ಅಟೆಂಡೆಂಟ್ (ಜವಾನ) 8, ಕ್ಲೀನರ್ (ಸ್ವಚ್ಛತಾಗಾರ) 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವ ಗ್ರಾಮ ಪಂಚಾಯಿತಿಯಲ್ಲಿ ಯಾವ ಹುದ್ದೆಗಳು ಖಾಲಿ ಇವೆ? ಎಂಬ ವಿವರಗಳನ್ನು ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ ಸಲ್ಲಿಸಿಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ ಸಲ್ಲಿಸಿ

Bengaluru Rural Zilla Panchayat Recruitment Apply Till June 6

ಎಲ್ಲಾ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ. ಸಂಬಂಧಪಟ್ಟ ಹುದ್ದೆಗಳಿಗೆ ನಿಗದಿತ ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗಕ್ಕೆ 300 ರೂ., ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 200 ರೂ., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕು.

ಎಸ್‌ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ ಎಸ್‌ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ

ಷರತ್ತುಗಳು; ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವವರು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅರ್ಹರು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅಧಿಸೂಚನೆಯಲ್ಲಿನ ಹುದ್ದೆವಾರು ವಿವರ, ವಿದ್ಯಾರ್ಹತೆ, ವಯಸ್ಸು, ಅನುಭವದ ಪ್ರಮಾಣ ಪತ್ರ, ಮೀಸಲಾತಿ ಮುಂತಾದ ಮಾಹಿತಿಯನ್ನು ನೋಡಿಕೊಂಡು ಅರ್ಜಿ ಸಲ್ಲಿಸಬೇಕು.

ಆಯ್ಕೆ ಸಮಿತಿಯು ಖಾಲಿ ಇರುವ ಹುದ್ದೆಗಳ ವರ್ಗಗಳಿಗೆ ಸಂಬಂಧಿಸಿದಂತೆ ಅರ್ಹತಾ ಪರೀಕ್ಷೆಯಲ್ಲಿಗಳಿಸಿದ ಗರಿಷ್ಠ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ಸಮಾನವಾಗಿ ಆಯ್ಕೆಪಟ್ಟಿಯನ್ನು ತಯಾರು ಮಾಡಲಿದೆ.

ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಆಯ್ಕೆಪಟ್ಟಿಯಲ್ಲಿ ನೇಮಕ ಮಾಡುವ ನಿಬಂಧನೆಗೊಳಪಟ್ಟಿರುತ್ತದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯಬೇಕಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 6/6/2022 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್ ಸೈಟ್ ವಿಳಾಸ http://bangalorerural.nic.inಮೇ 27ರಂದು

ಕ್ಯಾಂಪಸ್ ಸಂದರ್ಶನ; ರಾಮನಗರದ ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಯನ್ನು ನೀಡಲು ಕ್ಯಾಂಪಸ್ ಸಂದರ್ಶನವನ್ನು ಮೇ 27ರಂದು ಆಯೋಜನೆ ಮಾಡಿದೆ.

ಬೆಳಗ್ಗೆ 10 ಗಂಟೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪನ್ ಸಂದರ್ಶನ ನಡೆಯಲಿದೆ ಎಂದು ಕಲಬುರಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ ತಿಳಿಸಿದ್ದಾರೆ.

ಐಟಿಐ ಪಾಸಾದ ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರಾಮನಗರ ಹೆಚ್‌ಆರ್‌ಡಿ ಮೊಬೈಲ್ ಸಂಖ್ಯೆ 9686189321ಗೆ ಕರೆ ಮಾಡಬಹುದಾಗಿದೆ.

ಸಮುದಾಯ ಸಂಪನ್ಮೂಲ ಹುದ್ದೆ; ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ವಾಡಿ ಪುರಸಭೆಯಲ್ಲಿ ಗೌರವಧನದ ಆಧಾರದ ಮೇಲೆ ಸಮುದಾಯ ಸಂಪನ್ಮೂಲ ವ್ಯಕ್ತಿ ಎರಡು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ವಾಡಿ ಪ್ರದೇಶ ಮಟ್ಟದ ಒಕ್ಕೂಟ/ ಸ್ವ-ಸಹಾಯ ಸಂಘದ ಸದಸ್ಯರಾಗಿರುವ 18 ರಿಂದ 45 ವರ್ಷ ವಯೋಮಾನದ ದ್ವಿತೀಯ ಪಿಯುಸಿ ತೇರ್ಗಡೆಯಾದ ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 3ರ ಸಾಯಂಕಾಲ 4.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Recommended Video

Virat ಮಾಡಿದ ತಪ್ಪನ್ನು ಡುಪ್ಲೆಸಿಸ್ ಮಾಡಬಾರದು ಎಂದ Virender Sehwag |Oneindia Kannada

English summary
Bengaluru rural zilla panchayat invited applications for the bill collector, data entry operator, attendant and cleaner post. Candidates can apply online till June 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X