Zilla Panchayat Job: ಬೆಂಗಳೂರಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ವೇತನ-ವಿವರ

ಬೆಂಗಳೂರು, ಜುಲೈ 01: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ (BUZP Jobs) ನಲ್ಲಿ ವಿವಿಧ ಉದ್ಯೋಗವಕಾಶಗಳು ಖಾಲಿ ಇವೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಬೇಕು.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ (BUZP Jobs) ತನ್ನಲ್ಲಿ ಖಾಲಿ ಇರುವ ಒಟ್ಟು 5 ಟೆಕ್ನಿಕಲ್ ಅಸಿಸ್ಟೆಂಟ್, ಜಿಲ್ಲಾ MIS ಕೋಆರ್ಡಿನೇಟರ್ ಹುದ್ದೆಗಳ ನೇಮಕಾತಿ ಆರಂಭಿಸಿದೆ. ಇದಕ್ಕೆ ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಅಧಿಸೂಚನೆ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಕುರಿತು ವೇತನ, ವಯೋಮಿತಿ ಇನ್ನಿತರ ಮಾಹಿತಿ ಇಲ್ಲಿ ತಿಳಿಯಿರಿ.

Bengaluru Urban Zilla Panchayat Recruitment Apply for 5 Post now Know more

ನೇಮಕಾತಿ ಪೂರ್ಣ ಮಾಹಿತಿ

  • ಸಂಸ್ಥೆ ಹೆಸರು: ಬೆಂಗಳೂರು ಜಿಲ್ಲಾ ಪಂಚಾಯಿತಿ
  • ಹುದ್ದೆ ಎಷ್ಟು: ಐದು
  • ಪೋಸ್ಟಿಂಗ್: ಬೆಂಗಳೂರು
  • ಅರ್ಜಿ ಸಲ್ಲಿಕೆ ಕೊನೆ ದಿನ: ಜುಲೈ 02

ಹುದ್ದೆಗಳ ಇತರ ಮಾಹಿತಿ

  • ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್​)-1
  • ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್)- 1
  • ಜಿಲ್ಲಾ MIS ಕೋಆರ್ಡಿನೇಟರ್-1
  • ಟೆಕ್ನಿಕಲ್ ಅಸಿಸ್ಟೆಂಟ್- 2

ಶೈಕ್ಷಣಿಕ ಅರ್ಹತೆ ಏನಿರಬೇಕು?

ಜಿಲ್ಲಾ MIS ಕೋಆರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ/ಬಿ.ಟೆಕ್, ಎಂಸಿಎ ಪಡೆದಿರಬೇಕು. ಅದೇ ರೀತಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್, ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್​) ಹುದ್ದೆಗೆ ಫಾರೆಸ್ಟ್ರಿಯಲ್ಲಿ ಬಿ.ಎಸ್ಸಿ ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಿರಿಕಲ್ಚರ್​​ನಲ್ಲಿ ಬಿ.ಎಸ್ಸಿ ಪದವಿ ಪಡೆದಿರಬೇಕು.

Bengaluru Urban Zilla Panchayat Recruitment Apply for 5 Post now Know more

ಮಾಸಿಕ ವೇತನ

ಆಯ್ಕೆ ಆಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಅಂದರೆ ಕನಿಷ್ಠ ರೂ. 26,000ರಿಂದ 34,000ವರೆಗೆ ಇರಲಿದೆ. ಇನ್ನೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಅಧಿಸೂಚನೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಿರುವ ಸಂಬಂಧಿತ ಅಧಿಕಾರಿಗಳು ನಂತರ ಸಂದರ್ಶನ ಮೂಲಕ ಅಂತಿಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳ ಜೊತೆಗೆ 'ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು-560070' ಈ ವಿಳಾಸಕ್ಕೆ ಕಳುಹಿಸಬೇಕು.

ನೆನಪಿಡಬೇಕಾದ ದಿನಗಳು

  • ಅರ್ಜಿ ಸಲ್ಲಿಕೆ ಆರಂಭ ದಿನ ನಾಂಕ: 2024 ಜೂನ್ 07
  • ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 2024 ಜುಲೈ 2

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+