Get Updates
Get notified of breaking news, exclusive insights, and must-see stories!

ಬೆಸ್ಕಾಂ; ಅಪ್ರೆಂಟಿಸ್ ನೇಮಕಾತಿ, 400 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 14; ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 5 ಕೊನೆಯ ದಿನ.

ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಆಯ್ಕೆಗೊಂಡವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ತರಬೇತಿ ಅವಧಿಯಲ್ಲಿ 5 ರಿಂದ 7 ಸಾವಿರ ರೂ. ತನಕ ಸ್ಟೈಫಂಡ್ ನೀಡಲಾಗುತ್ತದೆ.

ಟೆಕ್ನಿಕಲ್ (ಡಿಪ್ಲೊಮಾ) ಅಪ್ರೆಂಟಿಸ್ 75 ಹುದ್ದೆಗಳಿಗೆ ಡಿಪ್ಲೊಮಾ ವ್ಯಾಸಂಗ ಮಾಡಿದವರು ಅರ್ಜಿ ಹಾಕಬಹುದು. ಗ್ರಾಜುಯೇಟ್ ಅಪ್ರೆಂಟಿಸ್ 325 ಹುದ್ದೆಗಳಿಗೆ ಬಿ.ಇ/ ಬಿ. ಟೆಕ್ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದು.

BESCOM Apprentice Recruitment Apply For 400 Post

ಬೆಸ್ಕಾಂ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ನೇಮಕಾತಿ ಪರೀಕ್ಷೆಯ ಅಂಕ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ನಡೆಯಲಿದೆ.

ಆಸಕ್ತರು ಬೆಸ್ಕಾಂ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವೆಬ್‌ಸೈಟ್‌ನಲ್ಲಿ ಮುಂದಿನ ಸಂಪರ್ಕಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದು ಮಾಡಿ.

ಜುಲೈ 15ರಿಂದ 30ರ ತನಕ ಬೆಸ್ಕಾಂನ ಎನ್‌ಎಟಿಸ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 5 ಕೊನೆಯ ದಿನವಾಗಿದೆ.

ಶಾರ್ಟ್ ಲಿಸ್ಟ್‌ಗೊಂಡ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ಆಗಸ್ಟ್ 16 ರಿಂದ 18ರ ತನಕ ಕಚೇರಿ ವೇಳೆಯಲ್ಲಿ ಬೆಳಗ್ಗೆ 11 ರಿಂದ 4 ಗಂಟೆಯ ತನಕ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 044-22542235, 080-22356756. ವೆಬ್ ಸೈಟ್ ವಿಳಾಸ bescom.org

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+