74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಚ್‌ಇಎಲ್

ಬೆಂಗಳೂರು, ಜುಲೈ 05 : ಬಿಎಚ್‌ಇಎಲ್ 74 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 21, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತ್ ಹೆವಿ ಎಲಿಕ್ಟ್ರಿಕಲ್ ಲಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ 40, ಸುಪರ್ ವೈಸರ್ 34 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 74 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿಟೆಕ್‌ ಪದವಿಯನ್ನು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಷನ್/ಸಿವಿಲ್/ಮೆಕಾನಿಕಲ್‌ ನಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ 50 ರಷ್ಟು ಅಂಕಗಳು.

BHEL recruitment 2018 : Apply for 74 various posts

ಸುಪರ್ ವೈಸರ್ ಹುದ್ದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಪದವಿಯನ್ನು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಷನ್/ಮೆಕಾನಿಕಲ್/ಸಿವಿಲ್ ಅನ್ನು ಶೇ 60 ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ 50 ರಷ್ಟು ಅಂಕಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಜುಲೈ 1, 2018ಕ್ಕೆ ಅನ್ವಯವಾಗುವಂತೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ವೇತನ ಶ್ರೇಣಿ : ಪ್ರಾಜೆಕ್ಟ್ ಇಂಜಿನಿಯರ್‌ಗೆ 56,580, ಸುಪರ್ ವೈಸರ್‌ಗೆ 28,180 ವೇತನ ನಿಗದಿಗೊಳಿಸಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಗೊಳಿಸಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+