ಬಿಎಚ್ಇಎಲ್ ನೇಮಕಾತಿ : 145 ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 17: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಎಚ್ಇಎಲ್) 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಈ ಕುರಿತಂತೆ ಪ್ರಕಟಣೆ ಹೊರಡಿಸಿದೆ. 145 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ತುಂಬಬಹುದಾಗಿದ್ದು, ಮೇ 06ರೊಳಗೆ ಸಲ್ಲಿಸಬೇಕಾಗುತ್ತದೆ.
ಸಂಸ್ಥೆ ಹೆಸರು: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್.
ಒಟ್ಟು ಹೆಸರು: ಇಂಜಿನಿಯರ್ ಟ್ರೈನಿ, ಎಕ್ಸಿಕ್ಯೂಟಿವ್ ಟ್ರೈನಿ
ಒಟ್ಟು ಹುದ್ದೆ: 145
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.05.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವೀಧರರು, ಪಿಜಿ ಡಿಗ್ರಿ,ಪಿಜಿ ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಒಬಿಸಿ, ಸಾಮಾನ್ಯ ಅಭ್ಯರ್ಥಿ : 500 ರು
ಎಸ್ ಸಿ/ ಎಸ್ ಟಿ/ಮಾಜಿ ಯೋಧ: 300 ರು
ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನ: 16.04.2019
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications