ಬೀದರ್‌ ನ್ಯಾಯಾಲಯದಲ್ಲಿ 22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 20 : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31/1/2019.

ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಮತ್ತು ಜವಾನರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಸ್ವಂತ ಕೈ ಬರಹದಿಂದ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಶೀಘ್ರಲಿಪಿಗಾರರು 7, ಬೆರಳಚ್ಚುಗಾರರು 2, ಬೆರಳಚ್ಚು ನಕಲುಗಾರರು 5, ಜವಾನರು 8 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿದ್ಯಾರ್ಹತೆ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

Bidar District Court Recruitment for 22 post

ವಯೋಮಿತಿ ವಿವರ : ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಸಾಮಾನ್ಯ ವರ್ಗ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳು 40 ವರ್ಷ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ನೇಮಕಾತಿ ಆದೇಶವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿಗಳನ್ನು ಸಲ್ಲಿಸಲು ವಿಳಾಸ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಬೀದರ್‌
ಬೀದರ್ ಜಿಲ್ಲೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+