ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ; 200ಕ್ಕೂ ಹೆಚ್ಚು ಕಂಪನಿಗಳ ಭಾಗಿ: ಸಂಪೂರ್ಣ ವಿವರ ಇಲ್ಲಿದೆ
ಮೈಸೂರು, ಅಕ್ಟೋಬರ್ 09: ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯಿಟ್ಟಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ವತಿಯಿಂದ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಅಕ್ಟೋಬರ್ 17, 2025ರಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಘನ ನೇತೃತ್ವದಲ್ಲಿ ನಡೆಯಲಿರುವ ಈ ಮೇಳವು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.

ಕರ್ನಾಟಕ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸಲು ಸಿದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ (KSDC) ವತಿಯಿಂದ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವು ಅಕ್ಟೋಬರ್ 17, 2025ರಂದು ಮೈಸೂರಿನ ಐತಿಹಾಸಿಕ ಮಹಾರಾಜ ಮೈದಾನದಲ್ಲಿ ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವು ನಿರುದ್ಯೋಗಿ ಯುವಕರಿಗೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗದ ಬಾಗಿಲು ತೆರೆಯಲಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಅವುಗಳು ವಿವಿಧ ಕ್ಷೇತ್ರಗಳಲ್ಲಿ ಹಲವಾರು ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಉದ್ಯೋಗಾಕಾಂಕ್ಷಿಗಳು ಒಂದೇ ಸೂರಿನಡಿ ಹಲವಾರು ಕಂಪನಿಗಳ ಮುಖಾಮುಖಿ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಲಿದ್ದಾರೆ.
ಯಾರೆಲ್ಲಾ ಭಾಗವಹಿಸಬಹುದು
SSLC, PUC, ಪದವಿ, ಸ್ನಾತಕೋತ್ತರ ಪದವಿ, ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರು.
ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು https://udyogamela.ksdckarnataka.com ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಹೆಸರನ್ನು ದಾಖಲಿಸಬಹುದು. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ರೆಸ್ಯೂಮ್ ನೊಂದಿಗೆ ಆಗಮಿಸುವಂತೆ KSDC ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿ ಅಥವಾ ಸಹಾಯವಾಣಿ 9606494308ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಈ ಉಪಕ್ರಮವು ರಾಜ್ಯದ ಯುವಜನರ ಕೌಶಲ್ಯ ಮತ್ತು ಉದ್ಯೋಗಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.












Click it and Unblock the Notifications