Job Fair: ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ: ಯಾವಾಗ, ಎಲ್ಲಿ ಮಾಹಿತಿ ಇಲ್ಲಿದೆ
ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಇದರಿಂದ ಈ ಭಾಗದ ನಿರುದ್ಯೋಗಿ ಯುವಕರಿಗೆ ಭಾರೀ ಲಾಭವಾಗುವ ನಿರೀಕ್ಷೆ ಇದೆ. ವಿಜಯಪುರದಲ್ಲಿ ಉದ್ಯೋಗ ಮೇಳವನ್ನು ನಡೆಸುತ್ತಿರುವ ಬಗ್ಗೆ ಸಚಿವ ಎಂ.ಬಿ ಪಾಟೀಲ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದರೆ ವಿಜಯಪುರದಲ್ಲಿ ಎಲ್ಲಿ ಹಾಗೂ ಯಾವಾಗ ಈ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಯಾರೆಲ್ಲ ಭಾಗವಹಿಸಬಹುದು ಎನ್ನುವುದು ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ.
ವಿಜಯಪುರದಲ್ಲಿ ವಿವಿಧ ಹಾಗೂ ಪ್ರತಿಷ್ಠಿತ ಸಂಸ್ಥೆಗಳು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿವೆ. ಇದರಿಂದ ಈ ಭಾಗದ ನೂರಾರು ಜನರಿಗೆ ಅನುಕೂಲ ಆಗುವ ನಿರೀಕ್ಷೆ ಇದೆ. ವಿಶೇಷವೆಂದರೆ 2 ದಿನಗಳ ಮಟ್ಟಿಗೆ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಬೆಂಗಳೂರು ಸಮೀಪದ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಲಿ. ವತಿಯಿಂದ ನವೆಂಬರ್ 20 ಬುಧವಾರ ಮತ್ತು 21 ಗುರುವಾರ ಬೃಹತ್ ಉದ್ಯೋಗ ಮೇಳವನ್ನು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಪಾಲಿಟೆಕ್ನಿಕ್ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ವಿಜಯಪುರ ಜಿಲ್ಲೆಯ 2023 ರಲ್ಲಿ ಡಿಪ್ಲೋಮಾ ಮತ್ತು ಐಟಿಐ ಪಾಸಾದ ಹಾಗೂ 2024ರಲ್ಲಿ ಪ್ರಸ್ತುತ ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಲು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕೆ ಅವಕಾಶ ಇದೆ.
ಆಸಕ್ತರು ತಮ್ಮ ಹೆಸರನ್ನು ಆನ್‌ಲೈನ್ ಮೂಲಕ ನೋಂದಾಯಿಸಲು ನವೆಂಬರ್ 19ರ ಮಂಗಳವಾರ ಸಂಜೆ 5 ಗಂಟೆಯ ವರೆಗೆ ಅವಕಾಶ ಇರಲಿದೆ. ಅಲ್ಲದೇ ಮೇಳದ ದಿನದಂದೇ ಸ್ಥಳದಲ್ಲಿಯೇ ನೋಂದಣಿ ಮಾಡಲು ಸಹ ಅವಕಾಶ ಕಲ್ಪಿಸಲಾಗಿದೆ.
ನವೆಂಬರ್ 20ರ ಬುಧವಾರ ಬೆಳಿಗ್ಗೆ 9.30ರಿಂದ ನೋಂದಣಿ ಮಾಡಿದ ವಿದ್ಯಾರ್ಥಿಗಳ ವಿಭಾಗವಾರು ಲಿಖಿತ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ನವೆಂಬರ್ 21ರ ಗುರುವಾರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.
ಈ ವಿಷಯಗಳನ್ನು ತಪ್ಪಿಸಬೇಡಿ: ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ತಪ್ಪದೇ ಬಯೋಡಾಟಾ ಹಾಗೂ ಅಂಕಪಟ್ಟಿಗಳ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ಹೇಳಲಾಗಿದೆ. ಹೀಗಾಗಿ, ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ತಪ್ಪದೇ ತಮ್ಮ ಮಾರ್ಕ್ಸ್ ಕಾರ್ಡ್‌ಗಳ ಜೆರಾಕ್ಸ್ ಹಾಗೂ ಬಯೋಡಾಟಾ ತರಬೇಕು ಎಂದು ಹೇಳಲಾಗಿದೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ: ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಮುಂಚಿತವಾಗಿಯೇ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿಯ ಲಿಂಕ್ https://forms.gle/EEy3dQD1wxyaJggp8 ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ. ಇನ್ನು ಮೇಳದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಎಸ್.ವಿ.ಕುಲಕರ್ಣಿ 9449246255 ಹಾಗೂ ವಿ.ಎಸ್.ಮರಿಮಠ 9916853605 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಇಂದೇ ರಿಜಿಸ್ಟ್ರೇಷನ್ ಮಾಡಿಕೊಳ್ಳಿ: ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಇನ್ನೊಂದು ವಾರದ ಅವಕಾಶ ಇದೆಯಾದರೂ, ಇಂದೇ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಿ. ಕೊನೆಯ ಹಂತದಲ್ಲಿ ಎದುರಾಗುವ ಗೊಂದಲಗಳನ್ನು ಈ ಮೂಲಕ ನೀವು ತಪ್ಪಿಸಿಕೊಳ್ಳಬಹುದಾಗಿದೆ. ಅಲ್ಲದೇ ಕೊನೆಯ ಹಂತದಲ್ಲಿ ಏನಾದರೂ ಸರ್ವರ್ ಡೌನ್‌ನಂತಹ ಸಮಸ್ಯೆಗಳು ಎದುರಾದರೂ ಸಮಸ್ಯೆ ಆಗಬಹುದು. ಹೀಗಾಗಿ, ಈಗಲೇ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.












Click it and Unblock the Notifications