Govt Job Alert: 9.79 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗ ಲಭ್ಯ- ಯಾವ ಇಲಾಖೆಯಲ್ಲಿ ಎಷ್ಟು? ಮಾಹಿತಿ, ವಿವರ ತಿಳಿಯಿರಿ

ನವದೆಹಲಿ, ಮಾರ್ಚ್ 29: ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಫ್ರೆಶರ್‌ಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ಉದ್ಯೋಗಾಂಕ್ಷಿಗಳು ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಮಾರ್ಚ್ 1, 2021 ರ ಹೊತ್ತಿಗೆ, ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಹೇಳಿದ್ದಾರೆ. ಭಾರತೀಯ ರೈಲ್ವೇಯಲ್ಲಿ ಅತಿ ಹೆಚ್ಚು ಅಂದರೆ 2.93 ಲಕ್ಷ ಉದ್ಯೋಗಗಳು ಖಾಲಿ ಇವೆ.

ಖಾಲಿ ಹುದ್ದೆಗಳ ಭರ್ತಿಯು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳ ಅಗತ್ಯತೆಗಳಿಗಾಗಿ ನಿರ್ವಹಿಸಲ್ಪಡುವ ನಿರಂತರ ಪ್ರಕ್ರಿಯೆಯಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

Big News For Job Seekers: Over 9.79 Lakh Govt Jobs Available In Indian Railways

ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಸಚಿವಾಲಯಗಳು / ಇಲಾಖೆಗಳಿಗೆ ಸೂಚನೆ ನೀಡಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸರ್ಕಾರದ ರೋಜ್‌ಗಾರ್ ಮೇಳಗಳು ಮತ್ತಷ್ಟು ಉದ್ಯೋಗ ಸೃಷ್ಟಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಉದ್ಯೋಗಗಳು

ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, ರಕ್ಷಣಾ (ನಾಗರಿಕ) ವಿಭಾಗದಲ್ಲಿ 2.64 ಲಕ್ಷ, ಗೃಹ ಇಲಾಖೆಯಲ್ಲಿ 1.43 ಲಕ್ಷ, ಇಂಡಿಯಾ ಪೋಸ್ಟ್‌ ಹುದ್ದೆಗಳಲ್ಲಿ 90,050, ಆದಾಯ ವಿಭಾಗದಲ್ಲಿ 80,243, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಖಾತೆಗಳ ವಿಭಾಗದಲ್ಲಿ 25,934 ಮತ್ತು ಪರಮಾಣು ವಿಭಾಗದಲ್ಲಿ 9,460 ಹುದ್ದೆಗಳು ಖಾಲಿ ಇವೆ.

ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆ

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಖಾಸಗಿ ಉದ್ಯೋಗ ಕ್ಷೇತ್ರವು ಪ್ರವರ್ಧಮಾನಕ್ಕೆ ಬಂದಿದ್ದರೂ ಸಹ, ದೇಶದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಇನ್ನೂ ಹೆಚ್ಚುತ್ತಿರುವ ಬೇಡಿಕೆಯಿದೆ. ಸಮಂಜಸವಾದ ವೇತನದ ಹೊರತಾಗಿ, ಸರ್ಕಾರಿ ಕೆಲಸವು ಸಾಮಾಜಿಕ ಸ್ಥಾನಮಾನ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ, ವಸತಿ ಮತ್ತು ಇತರ ಸವಲತ್ತುಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ, ನಡೆಯುತ್ತಿರುವ ವಜಾಗಳು ಮತ್ತು ಖಾಸಗಿ ವ್ಯವಹಾರಗಳ ಮುಚ್ಚುವಿಕೆಗಳು ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆಯನ್ನು ಹೆಚ್ಚಿಸಿವೆ.

Big News For Job Seekers: Over 9.79 Lakh Govt Jobs Available In Indian Railways

ಕಳೆದ ಎಂಟು ವರ್ಷಗಳಿಂದ ಸರ್ಕಾರಿ ಉದ್ಯೋಗಗಳ ಬೇಡಿಕೆ ಹೆಚ್ಚಾಗಿದೆ. ಆದಾಗ್ಯೂ, 2014- 15 ರಿಂದ 2021- 22 ರ ವರೆಗೆ ಸ್ವೀಕರಿಸಿದ 22. 05 ಕೋಟಿ ಅರ್ಜಿಗಳಲ್ಲಿ ಕೇವಲ 7.22 ಲಕ್ಷ ಅಥವಾ ಶೇಕಡಾ 0.33 ರಷ್ಟು ಅರ್ಜಿಗಳನ್ನು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎಂದು ಸರ್ಕಾರ ಕಳೆದ ವರ್ಷ ಮುಂಗಾರು ಅಧಿವೇಶನದಲ್ಲಿ ಲೋಕಸಭೆಗೆ ತಿಳಿಸಿದೆ.

ಕೇಂದ್ರ ಸರ್ಕಾರ ನಡೆಸುವ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿದಂತೆ 58,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಈ ವಿಷಯವನ್ನು ಪೆಬ್ರವರಿಯಲ್ಲಿ ತಿಳಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯಗಳಲ್ಲಿ 12,099 ಬೋಧಕ ಹುದ್ದೆಗಳಿದ್ದು, 1,312 ಬೋಧಕೇತರ ಹುದ್ದೆಗಳು ಖಾಲಿ ಇವೆ. ಜವಾಹರ ನವೋದಯ ವಿದ್ಯಾಲಯಗಳಲ್ಲಿ 3,271 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ಸಂಖ್ಯೆ 1,756.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ, ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಅತಿ ಹೆಚ್ಚು ಹುದ್ದೆಗಳು ಖಾಲಿ ಇವೆ, ಅಲ್ಲಿ 6,180 ಬೋಧಕ ಹುದ್ದೆಗಳು ಮತ್ತು 15,798 ಬೋಧಕೇತರ ಹುದ್ದೆಗಳು ಇನ್ನೂ ಭರ್ತಿಯಾಗಬೇಕಿದೆ.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) 4,425 ಬೋಧಕ ಹುದ್ದೆಗಳು ಖಾಲಿಯಿದ್ದರೆ, 5,052 ಬೋಧಕೇತರ ಹುದ್ದೆಗಳು ಖಾಲಿ ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+