ಬಿಎಂಆರ್‌ಸಿಎಲ್‌ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 07 : ಬಿಎಂಆರ್‌ಸಿಎಲ್ 33 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅನುಭವಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲಾ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ.

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಆಪರೇಷನ್ ಎಂಡ್ ಮೈಟೆನೆನ್ಸ್ ವಿಭಾಗದಲ್ಲಿನ 33ಮ್ಯಾನೇಜರ್ ಮತ್ತು ಅಸಿಸ್ಟೆಂಡ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಿದೆ.

1223 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಎಸ್‌ಸಿ

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಾಗಿದೆ. ವೇತನ ಶ್ರೇಣಿ ಮ್ಯಾನೇಜರ್ (ಆಪರೇಷನ್) 63,960, ಅಸಿಸ್ಟೆಂಟ್ ಮ್ಯಾನೇಜರ್ (ಎಚ್ಆರ್) 52,920 ರೂ.ಗಳು.

BMRC recruitment 2018 : Apply for 33 various posts

ಮ್ಯಾನೇಜರ್ (ಆಪರೇಷನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಬಿಇಎಲ್ ನಲ್ಲಿ ಇಂಜಿನಿಯರ್ ಗಳಿಗೆ ಉದ್ಯೋಗಾವಕಾಶ

ಅಸಿಸ್ಟೆಂಟ್ ಎಚ್ಆರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಸರ್ನಲ್ ಮ್ಯಾನೇಜ್‌ಮೆಂಟ್ ಅಥವ ತತ್ಸಮಾನ ಕೋರ್ಸ್ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 (ಅಸಿಸ್ಟೆಂಟ್ ಎಚ್ಆರ್), 40 ವರ್ಷ (ಮ್ಯಾನೇಜರ್) ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಮಾರ್ಚ್ 28ರೊಳಗೆ ಸಲ್ಲಿಸಬಹುದಾಗಿದೆ.

ಪ್ರಮುಖ ಅಂಶಗಳು
* ಬೆಂಗಳೂರು ಮೆಟ್ರೊ ರೈಲು ನಿಗಮ
* ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ
* 33 ಹುದ್ದೆಗಳು
* ಮಾರ್ಚ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BMRCL invites applications from qualified and experienced personnel for appointment to positions in the Operations and Maintenance Wing. All appointments proposed will be on contract basis only. March 28, 2018 last date for submit applications.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ