ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

ಬೆಂಗಳೂರು, ಅಕ್ಟೋಬರ್ 30 : ಬೆಂಗಳೂರು ಮೆಟ್ರೋ ರೈಲು ನಿಗಮ ವಿವಿಧ ಹುದ್ದೆಗಳ ಭರ್ತಿಗೆ ಕರೆದಿದ್ದ ನೇಮಕಾತಿ ಆದೇಶವನ್ನು ವಾಪಸ್ ಪಡೆದಿದೆ. ಪರೀಕ್ಷೆ ಬರೆದಂತಹ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ವಾಪಸ್ ಮಾಡುವುದಾಗಿ ತಿಳಿಸಿದೆ.

ಬಿಎಂಆರ್‌ಸಿಎಲ್ 3/1/2019ರಂದು ನೀಡಿದ್ದ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆಗಳು ಸಹ ನಡೆದಿತ್ತು. ಈಗ ಎಲ್ಲಾ ಹುದ್ದೆಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಮೆಂಟೇನರ್ (134), ಜೂನಿಯರ್ ಇಂಜಿನಿಯರ್ (21), ಸೆಕ್ಷನ್ ಇಂಜಿನಿಯರ್ (19) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು. ಆಡಳಿತಾತ್ಮಕ ಕಾರಣದಿಂದಾಗಿ ಎಲ್ಲಾ ಹುದ್ದೆಗಳ ನೇಮಕಾತಿ ರದ್ದುಗೊಳಿಸಲಾಗಿದೆ.

BMRCL Cancelled Recruitment Of All Post

ಯಾವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಕಟ್ಟಿ ಪರೀಕ್ಷೆಗೆ ಹಾಜರಾಗಿರುವರೋ ಅಂತಹ ಅಭ್ಯರ್ಥಿಗಳಿಗೆ ಶುಲ್ಕವನ್ನು ವಾಪಸ್ ನೀಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬ್ಯಾಂಕ್ ವಿವರಗಳನ್ನು ನೀಡಬೇಕು ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಅಭ್ಯರ್ಥಿಗಳು www.bmrc.co.in/career ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕವನ್ನು ನಮೂದಿಸಿ ಬ್ಯಾಂಕ್ ವಿವರಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+