ಬಿಎಂಆರ್‌ಸಿಎಲ್ ನೇಮಕಾತಿ; ಹುದ್ದೆ, ವೇತನದ ಮಾಹಿತಿ ತಿಳಿಯಿರಿ
ಬೆಂಗಳೂರು, ಜೂನ್ 22: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 10/7/2024. ಅಗತ್ಯ ದಾಖಲೆಗಳನ್ನು ಅರ್ಜಿಯ ಜೊತೆ ಸ್ಪೀಡ್ ಪೋಸ್ಟ್/ ಕೋರಿಯರ್ ಮೂಲಕ ಸಲ್ಲಿಕೆ ಮಾಡಲು 15/7/2024ರ ಸಂಜೆ 4 ಗಂಟೆ ಕೊನೆಯ ದಿನವಾಗಿದೆ.
ಬಿಎಂಆರ್‌ಸಿಎಲ್ 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರು ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ & ನಿರ್ವಹಣೆ ವಿಭಾಗದಲ್ಲಿ 5 ವರ್ಷಗಳ ತನಕ ವಿಸ್ತರಣೆ ಮಾಡಬಹುದಾದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಮೆಟ್ರುಕ್ಯುಲೇಷನ್ ಜೊತೆಗೆ ಮೂರು ವರ್ಷದ ಡಿಪ್ಲೊಮಾವನ್ನು ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕಾನಿಕಲ್ ಇಂಜಿನಿಯರಿಂಗ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ರಕ್ಷಣಾ ಸೇವೆ/ ವಿಭಾಗ ಪ್ರಮಾಣೀಕರಿಸಿದಂತೆ ಪಡೆದಿರಬೇಕು.
ವಯೋಮಿತಿ, ವೇತನ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,000-82,660 ರೂ. ವೇತನವನ್ನು ವಾರ್ಷಿಕ ಶೇ 3ರಷ್ಟು ಹೆಚ್ಚಳದೊಂದಿಗೆ ನಿಗದಿ ಮಾಡಲಾಗಿದೆ. ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ, ನಿರ್ವಹಣೆ ವಿಭಾಗದಂತೆ ಭತ್ಯೆಗಳು ದೊರೆಯಲಿದೆ.
www.bmrc.co.in / Career Section ವೆಬ್‌ಸೈಟ್‌ನಲ್ಲಿ ಅರ್ಜಿಗಳು ಲಭ್ಯವಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಿ ಬಳಿಕ ಅದನ್ನು ಪ್ರಿಂಟ್ ತೆಗೆದುಕೊಂಡು ಸಹಿ ಮಾಡಿ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ರಕ್ಷಣಾ ಇಲಾಖೆಯಿಂದ ಬಿಡುಗಡೆ ಹೊಂದಿದ ಪತ್ರ, ಜನ್ಮದಿನಾಂಕವನ್ನು ಪ್ರಮಾಣೀಕರಿಸುವ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನ್ನಡ ಓದಲು, ಬರೆಯಲು, ಅರ್ಥ ಮಾಡಿಕೊಳ್ಳಲು ಬರುವುದು ಕಡ್ಡಾಯ. ಕನ್ನಡ ಬಾರದ ಅಭ್ಯರ್ಥಿಗಳು ಕಡ್ಡಾಯವಾಗಿ ಸೇವೆಗೆ ಸೇರಿದ ಒಂದು ವರ್ಷದೊಳಗೆ ಕನ್ನಡ ಓದಲು, ಬರೆಯಲು ಮತ್ತು ಅರ್ಥ ಮಾಡಿಕೊಳ್ಳಲು ಕಲಿಯಬೇಕು.
ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಗುತ್ತಿಗೆ ಅವಧಿಯನ್ನು 5 ವರ್ಷಗಳ ತನಕ ವಿಸ್ತರಣೆ ಮಾಡಲು ಅವಕಾಶವಿದೆ. ಮೂರು ತಿಂಗಳ ನೋಟಿಸ್ ನೋಡಿ ಗುತ್ತಿಗೆ ಅವಧಿಯನ್ನು ರದ್ದುಪಡಿಸಲು ಸಹ ಅವಕಾಶವಿದೆ.
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿದ ಬಳಿಕ ಅಭ್ಯರ್ಥಿಗಳು ಸಹಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ 15/7/2024ರ ಸಂಜೆ 4 ಗಂಟೆಯ ಒಳಗೆ ಈ ವಿಳಾಸಕ್ಕೆ ಅಂಚೆ/ ಕೋರಿಯರ್ ಮೂಲಕ ಸಲ್ಲಿಸಬೇಕು. ಎನಲೋಪ್ ಮೇಲೆ APPLICATION FOR THE POST OF STATION CONTROLLER / TRAIN OPERATOR ಎಂದು ಬರೆದಿರಬೇಕು.
ಅರ್ಜಿ ಸಲ್ಲಿಕೆ ಮಾಡಲು ವಿಳಾಸ
General Manager (HR),
Bangalore Metro Rail Corporation Limited,
III Floor, BMTC Complex, K.H Road, Shanthinagar,
Bengaluru - 560027
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ [email protected] . ಸಂಪರ್ಕಿಸಬಹುದು ಅಥವ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications