ನಮ್ಮ ಮೆಟ್ರೋದಲ್ಲಿ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಲು ಆ.26 ಕೊನೆ
ಬೆಂಗಳೂರು, ಜುಲೈ 31 : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ನಲ್ಲಿ ಖಾಲಿ ಇರುವ ಒಟ್ಟು 20 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಸೆಕ್ಷನ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಆಗಸ್ಟ್ 26, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಸೆಕ್ಷನ್ ಇಂಜಿನಿಯರ್ (20)
ವೇತನ ಶ್ರೇಣಿ: 35910 ರು. ತಿಂಗಳಿಗೆ
ವಯೋಮಿತಿ: 31 ಜುಲೈ 2017ಕ್ಕೆ ಅನ್ವಯವಾಗುಂತೆ ಗರಿಷ್ಠ 35 ವರ್ಷ.
ಇತರೆ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿದ್ಯಾರ್ಹತೆ: ಪದವಿಯಲ್ಲಿ ಅಥವಾ ಡಿಪ್ಲಮೋನಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಾನಿಕಲ್. ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್ ಕಮ್ಯೂನಿಕೆಷನ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಬಳಿಕ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇನ್ನಉ ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.











Click it and Unblock the Notifications